ಬೀಜಿಂಗ್: ಜಗತ್ತು ಹೊಸದೊಂದು ಬಂಡಾಯ ಮತ್ತು ಪರಿವರ್ತನೆಗೆ ಕಾಲಿಡುತ್ತಿದೆ. ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಚೀನಾ ಅಸ್ಥಿರತೆ ಮತ್ತು ಅನಿರ್ದಿಷ್ಟತೆಯನ್ನು ಎದುರಿಸುತ್ತಿದೆ ಎಂದು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಎಚ್ಚರಿಸಿದ್ದಾರೆ.
ಇದೇ ವೇಳೆ, ಚೀನಾ ಸೇನೆಯು ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷಕ್ಕೆ ವಿಧೇಯರಾಗಿರುವ ವಿಶ್ವಾಸಾರ್ಹ ವ್ಯಕ್ತಿಗಳಿಂದ ಕೂಡಿರಬೇಕು ಎಂದು ಅವರು ಹೇಳಿದ್ದಾರೆ.
ಗುರುವಾರ ನಡೆದ ಸಭೆಯಲ್ಲಿ ಸೇನೆಯನ್ನು ಬಲಿಷ್ಠಗೊಳಿಸುವ ಕಾರ್ಯತಂತ್ರಗಳ ಬಗ್ಗೆ ಅವರು ಮಾತನಾಡಿದರು. ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ) 95ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಷಿ ಜಿನ್‌ಪಿಂಗ್ ಅವರನ್ನು ಆಹ್ವಾನಿಸಲಾಗಿತ್ತು. ಪಿಎಲ್ಎ ವಿಶ್ವ ಅತಿದೊಡ್ಡ ಸೇನಾಪಡೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.