ಬೀಜಿಂಗ್: ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ಶನಿವಾರ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 9ಕ್ಕೇರಿದ್ದು, ಸ್ಥಳೀಯ ಅಧಿಕಾರಿಗಳು ಅಲ್ಲಿನ ಹೋಟೆಲ್ ಬುಕಿಂಗ್ ನಿರ್ಬಂಧಿಸುವ ಮತ್ತು ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಚೀನಾದ ವಿವಿಧ ಭಾಗಗಳಲ್ಲಿ ಒಟ್ಟು 38 ಕೋವಿಡ್ ಪ್ರಕರಣಗಳು ದಾಖಲಾಗಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.
ಬೀಜಿಂಗ್‌ನಲ್ಲಿ ಕೋವಿಡ್ ದೃಢಪಟ್ಟ ಐದು ಮಂದಿ ಮಂಗೋಲಿಯಾದ ಸ್ವಾಯತ್ತ ಪ್ರದೇಶ, ನಿಂಗ್ಸಿಯಾ ಹುಯಿ ಸ್ವಾಯತ್ತ ಪ್ರದೇಶ ಮತ್ತು ಶಾಂಕ್ಸಿ ಪ್ರಾಂತ್ಯಕ್ಕೆ ಅ. 12ರಿಂದ 15ರತನಕ ಪ್ರಯಾಣಿಸಿದ್ದಾರೆ. ಅ. 16ರಂದು ಅವರು ಬೀಜಿಂಗ್‌ಗೆ ಹಿಂತಿರುಗಿದ್ದಾರೆ. ಶುಕ್ರವಾರ ಒಟ್ಟಾರೆ ದೇಶದಾದ್ಯಂತ 32 ಪ್ರಕರಣಗಳು ವರದಿಯಾಗಿದ್ದವು. ಶನಿವಾರ ಈ ಸಂಖ್ಯೆ 38ಕ್ಕೆ ಏರಿದೆ ಎಂದು ಆಯೋಗವು ಮಾಹಿತಿ ನೀಡಿದೆ.
ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ, ಬೀಜಿಂಗ್ ಸೇರಿದಂತೆ ಇತರೆಡೆಗಳಲ್ಲಿ ಕೋವಿಡ್ ಪರೀಕ್ಷೆ, ಐಸೋಲೇಷನ್, ಹೋಟೆಲ್ ಬುಕಿಂಗ್‌ಗಳನ್ನು ರದ್ದು ಮಾಡುವುದು, ಸ್ಯಾನಿಟೈಸರ್ ಮತ್ತು ಮಾಸ್ಕ್ ಬಳಕೆಯನ್ನು ಹೆಚ್ಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.