ಬೆಂಗಳೂರು: 1993ರ ಮುಂಬೈ ಸ್ಫೋಟದ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆರೋಗ್ಯ ತೀವ್ರ ಹದಗೆಟ್ಟಿದ್ದು, ಪಾಕಿಸ್ತಾನದ ಕರಾಚಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾನೆ ಎಂದು ತಿಳಿದುಬಂದಿದೆ.
ದಾವೂದ್‌ಗೆ ವಿಷಪ್ರಾಶನ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡುತ್ತಿದ್ದು, ಈ ಬಗ್ಗೆ ಆಧಿಕೃತ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.
2 ದಿನಗಳ ಹಿಂದೆ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯ ಒಳಗೂ ಹೊರಗೂ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇಡೀ ಮಹಡಿಯಲ್ಲಿ ದಾವೂದ್ ಮಾತ್ರ ಇದ್ದು, ಆಸ್ಪತ್ರೆಯ ಉನ್ನತ ಅಧಿಕಾರಿಗಳು ಹಾಗೂ ಆತನ ಕುಟುಂಬಸ್ಥರಿಗೆ ಮತ್ತು ಆಪ್ತರಿಗೆ ಮಾತ್ರ ಪ್ರವೇಶಕ್ಕೆ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ದಾವೂದ್ ಆಸ್ಪತ್ರೆಗೆ ಸೇರಿರುವ ಬಗ್ಗೆ ಆತನ ಸಂಬಂಧಿಕರಾದ ಅಲಿಶಾ ಪರ್ಕರ್ ಹಾಗೂ ಸಜಿದ್ ವಾಗ್ಲೆ ಅವರಿಂದ ಮುಂಬೈ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ‘ಇಂಡಿಯಾ ಟುಡೆ‘ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.