ಮಾಯು: ಹವಾಯಿ ರಾಜ್ಯದ ಮಾಯು ಕೌಂಟಿಯ ಲಾಹಿಯಾನ ಪಟ್ಟಣವು ಕಾಳ್ಗಿಚ್ಚಿನಿಂದ ತತ್ತರಿಸಿದ್ದು, ಮೃತಪಟ್ಟವರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ ಎಂದು 'ನ್ಯೂಯಾರ್ಕ್ ಟೈಮ್ಸ್' ವರದಿ ಮಾಡಿದೆ.
ದ್ವೀಪದಲ್ಲಿ ಉಂಟಾಗಿರುವ ಕಾಳ್ಗಿಚ್ಚಿನಿಂದ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ಲಾಹಿಯಾನದ ಸಮೀಪದ ಕಾನಪಲಿ ಪಟ್ಟಣದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಆದೇಶಿಸಲಾಗಿದೆ ಎಂದು ಮಾಯು ಪೊಲೀಸರು ತಿಳಿಸಿದ್ದಾರೆ.
ಕ್ಯಾಲಿಫೋರ್ನಿಯಾ ಮತ್ತು ವಾಷಿಂಗ್ಟನ್‌ನಿಂದ ರಕ್ಷಣಾ ಕಾರ್ಯಚರಣೆಗೆ ಸಿಬ್ಬಂದಿ ಆಗಮಿಸಿದ್ದಾರೆ. ಶ್ವಾನಗಳನ್ನು ಬಳಸಿ ಮೃತದೇಹಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.