ADVERTISEMENT

ತಾಂತ್ರಿಕ ದೋಷ: ಅಮೆರಿಕಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ರಷ್ಯಾದಲ್ಲಿ ಲ್ಯಾಂಡ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜುಲೈ 2024, 3:13 IST
Last Updated 19 ಜುಲೈ 2024, 3:13 IST
<div class="paragraphs"><p>ಏರ್ ಇಂಡಿಯಾ ವಿಮಾನ</p></div>

ಏರ್ ಇಂಡಿಯಾ ವಿಮಾನ

   

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಮಾರ್ಗ ಬದಲಿಸಿ ರಷ್ಯಾದ ಕ್ರಾಸ್ನಾಯಾರ್ಕ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.

ಈ ಬಗ್ಗೆ ಏರ್‌ ಇಂಡಿಯಾ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.

ADVERTISEMENT

‘ವಿಮಾನ ಯಶಸ್ವಿಯಾಗಿ ಲ್ಯಾಂಡ್ ಆಗಿದ್ದು, ಸಂಬಂಧಪಟ್ಟವರು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುತ್ತಿದ್ದಾರೆ’ ಎಂದು ಅದು ಹೇಳಿದೆ.

ವಿಮಾನದಲ್ಲಿ ಎಷ್ಟು ಮಂದಿ ಪ್ರಯಾಣಿಕರಿದ್ದರು ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

‘ದೆಹಲಿಯಿಂದ ಸ್ಯಾನ್‌ ಫ್ರಾನ್ಸಿಸ್ಕೊಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ AI-183ಯಲ್ಲಿ ತಾಂತ್ರಿಕ ದೋಷ ಗೋಚರಿಸಿದ್ದರಿಂದ ರಷ್ಯಾದ ಕ್ರಾಸ್ನಾಯಾರ್ಕ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಾರ್ಗ ಬದಲಾಯಿಸಲಾಗಿದೆ. ಪ್ರಯಾಣಿಕರ ಕ್ಷೇಮ ಖಚಿತಪಡಿಸಿಕೊಳ್ಳಲು ನಾವು ಸಂಬಂಧಿತ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ. ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.