ನವದೆಹಲಿ: ಜಪಾನ್‌ನ ಕುರಿಲ್ ದ್ವೀಪದಲ್ಲಿ ಇಂದು ಮಧ್ಯಾಹ್ನ (ಗುರುವಾರ) ಪ್ರಬಲ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಮಧ್ಯಾಹ್ನ 2.45 ಸುಮಾರಿಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ ಎಂದು ಅದು ಹೇಳಿದೆ.
ಜಪಾನ್‌ನ ಕುರಿಲ್ ದ್ವೀಪದಲ್ಲಿ 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ತಿಳಿಸಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.