ADVERTISEMENT

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಏಜೆನ್ಸೀಸ್
Published 1 ಏಪ್ರಿಲ್ 2022, 20:13 IST
Last Updated 1 ಏಪ್ರಿಲ್ 2022, 20:13 IST
ಸರ್ಕಾರದ ವಿರುದ್ಧ ಪ್ರತಿಭಟನೆ
ಸರ್ಕಾರದ ವಿರುದ್ಧ ಪ್ರತಿಭಟನೆ    

ಕೊಲಂಬೊ: ತೀವ್ರ ಸ್ವರೂಪದ ಆರ್ಥಿಕ ಮುಗ್ಗಟ್ಟಿನಿಂದ ಪ್ರಕ್ಷುಬ್ಧಗೊಂಡಿರುವ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಈ ಕುರಿತು ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಶುಕ್ರವಾರ ಘೋಷಿಸಿದರು.

ನೂರಾರು ಜನರು ರಾಜಪಕ್ಸ ಅವರ ನಿವಾಸವನ್ನು ಮುತ್ತಿಗೆ ಹಾಕಲು ಪ್ರಯತ್ನಿಸಿದ ಮರುದಿನವೇ ಈ ನಿರ್ಧಾರ ಕೈಗೊಳ್ಳಲಾಗಿದೆ. ‘ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತುಪರಿಸ್ಥಿತಿ ಇದೆ ಎಂಬುದು ನನ್ನ ನಂಬಿಕೆ. ಅದರಿಂದಾಗಿ ಕಠಿಣ ಕಾನೂನುಗಳನ್ನು ಜಾರಿ ಮಾಡ
ಬೇಕಾಯಿತು. ಶಂಕಿತರನ್ನು ಬಂಧಿಸಲು, ವಶಕ್ಕೆ ತೆಗೆದುಕೊಳ್ಳಲು ಭದ್ರತಾ ಪಡೆಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ’ ಎಂದು ರಾಜಪಕ್ಸ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT