ADVERTISEMENT

ಪಾಕಿಸ್ತಾನ | ಪ್ರಯಾಣಿಕ ವಾಹನದ ಮೇಲೆ ಗುಂಡಿನ ದಾಳಿ: 11 ಮಂದಿ ಸಾವು

ಪಿಟಿಐ
Published 12 ಅಕ್ಟೋಬರ್ 2024, 13:39 IST
Last Updated 12 ಅಕ್ಟೋಬರ್ 2024, 13:39 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಪೇಶಾವರ: ಪಾಕಿಸ್ತಾನದ ವಾಯವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ಬಂದೂಕುಧಾರಿಗಳು ಪ್ರಯಾಣಿಕರ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಕನಿಷ್ಠ 11 ಜನ ಮೃತಪಟ್ಟು, 6 ಮಂದಿ ಗಾಯಗೊಂಡಿದ್ದಾರೆ.

ಅಫ್ಗಾನಿಸ್ತಾನದ ಗಡಿಯಲ್ಲಿರುವ ಕುರ್ರಂ ಜಿಲ್ಲೆಯ ಕಂಜ್ ಅಲಿಜೈ ಪ್ರದೇಶದಲ್ಲಿ ಬಂದೂಕುಧಾರಿಗಳು ಪ್ರಯಾಣಿಕ ವಾಹನವನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ADVERTISEMENT

ಸ್ಥಳಕ್ಕೆ ಧಾವಿಸಿದ ‍ಪೊಲೀಸ್‌ ಸಿಬ್ಬಂದಿ ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ದಾಳಿಯ ಹೊಣೆಗಾರಿಕೆಯನ್ನು ಇನ್ನೂ ಯಾವುದೇ ಗುಂಪು ಹೊತ್ತುಕೊಂಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.