ADVERTISEMENT

ಟ್ರಂಪ್ ‘ಕಠಿಣ’ ವ್ಯಕ್ತಿ; ಅಮೆರಿಕದ ಅಧ್ಯಕ್ಷರೆಂದು ಅನುಮೋದಿಸುತ್ತೇನೆ: ಮಸ್ಕ್

ರಾಯಿಟರ್ಸ್
Published 14 ಜುಲೈ 2024, 3:01 IST
Last Updated 14 ಜುಲೈ 2024, 3:01 IST
ಇಲಾನ್‌ ಮಸ್ಕ್, ಡೊನಾಲ್ಡ್ ಟ್ರಂಪ್
ಇಲಾನ್‌ ಮಸ್ಕ್, ಡೊನಾಲ್ಡ್ ಟ್ರಂಪ್   

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿಯನ್ನು ಟೆಸ್ಲಾ ಕಂಪನಿ ಮಾಲೀಕ ಇಲಾನ್‌ ಮಸ್ಕ್ ತೀವ್ರವಾಗಿ ಖಂಡಿಸಿದ್ದಾರೆ.

‘ನಾನು ಡೊನಾಲ್ಡ್ ಟ್ರಂಪ್ ಅವರನ್ನು ಅಮೆರಿಕದ ಅಧ್ಯಕ್ಷರೆಂದು ಸಂಪೂರ್ಣವಾಗಿ ಅನುಮೋದಿಸುತ್ತೇನೆ. ಅವರ ಶೀಘ್ರ ಗುಣಮುಖರಾಗಲಿ’ ಎಂದು ಮಸ್ಕ್ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ರಿಪಬ್ಲಿಕನ್ ಪಕ್ಷದ ಸಂಭಾವ್ಯ ಅಧ್ಯಕ್ಷೀಯ ಅಭ್ಯರ್ಥಿಯೂ ಆಗಿರುವ ಡೊನಾಲ್ಡ್‌ ಟ್ರಂಪ್ ಅವರನ್ನು ‘ಕಠಿಣ’ ವ್ಯಕ್ತಿ ಎಂದು ಮಸ್ಕ್ ಕರೆದಿದ್ದಾರೆ.

ADVERTISEMENT

ಮಸ್ಕ್ ಹೇಳಿಕೆಯಿಂದಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ವಿರುದ್ಧ ಕೇಳಿಬರುತ್ತಿರುವ ಟೀಕೆಗಳಿಗೆ ಪುಷ್ಟಿ ನೀಡುವಂತಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್‌ ಟ್ರಂಪ್ ಅವರು ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ 78 ವರ್ಷದ ಟ್ರಂಪ್ ಅವರಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಶಂಕಿತ ಬಂದೂಕುಧಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕದ ಸಿಕ್ರೇಟ್ ಸರ್ವಿಸ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.