ಕಾಬೂಲ್: ಅಫ್ಗಾನಿಸ್ತಾನದ ಕಾಬೂಲ್‌ನ ಮುಖ್ಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ದೇಶೀಯ ಪಂದ್ಯ ನಡೆಯುತ್ತಿರುವಾಗಲೇ ಬಾಂಬ್ ಸ್ಫೋಟಗೊಂಡಿದೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ಅಫ್ಗಾನಿಸ್ತಾನ ಕ್ರಿಕೆಟ್ ಮಂಡಳಿ (ಎಸಿಬಿ) ತಿಳಿಸಿದೆ.
‘ಸ್ಪಗೀಜಾ ಲೀಗ್‌ನ ಎರಡು ತಂಡಗಳ ನಡುವೆ ಪಂದ್ಯ ನಡೆಯುತ್ತಿತ್ತು. ಇದೇ ವೇಳೆ ಸ್ಫೋಟ ಸಂಭವಿಸಿತು. ವೀಕ್ಷಕರ ಗುಂಪಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ’ ಎಂದು ಎಸಿಬಿಯ ಮುಖ್ಯ ಕಾರ್ಯನಿರ್ವಾಹಕ ನಸೀಬ್ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸಿಬಿ ಸಿಬ್ಬಂದಿ ಮತ್ತು ಆಟಗಾರರೆಲ್ಲ ಸುರಕ್ಷಿತವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕಳೆದ ತಿಂಗಳು ಕಾಬೂಲ್‌ನಲ್ಲಿರುವ ಗುರುದ್ವಾರದಲ್ಲಿ ಗ್ರೆನೇಡ್ ಸ್ಫೋಟ ಸಂಭವಿಸಿ ಇಬ್ಬರು ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.