ಢಾಕಾ: ಶೇಖ್ ಹಸೀನಾ ನೇತೃತ್ವದ ಸರ್ಕಾರ ಪತನಗೊಂಡ ಬೆನ್ನಲ್ಲೇ, ಸಚಿವಾಲಯದ ಉದ್ಯೋಗಿಗಳು ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ನೌಕರರಲ್ಲಿ ಆತಂಕ ಮತ್ತು ಅನಿಶ್ಚಿತತೆ ಮನೆ ಮಾಡಿದೆ ಎಂದು ಸ್ಥಳೀಯ ಮಾಧ್ಯಮಗಳು ಮಂಗಳವಾರ ವರದಿ ಮಾಡಿವೆ.
ರಾಜಧಾನಿ ಢಾಕಾದಲ್ಲಿನ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ನೌಕರರ ಹಾಜರಾತಿ ಮಂಗಳವಾರ ಕಡಿಮೆ ಇತ್ತು. ವಿವಿಧ ಸಚಿವಾಲಯಗಳ ಕಚೇರಿಗಳಲ್ಲಿ ಗಮನಾರ್ಹ ಪ್ರಮಾಣದಲ್ಲಿ ಹಾಜರಾತಿ ಕಡಿಮೆ ಇತ್ತು. ಸಚಿವರು, ಸಂಸದರು ಸಹ ಕಚೇರಿಯಲ್ಲಿ ಸುಳಿದಿರಲಿಲ್ಲ. ಕಚೇರಿ ಬಂದವರು ಕೂಡ ಆತಂಕ–ಭಯದಲ್ಲಿಯೇ ಕೆಲಸ ನಿರ್ವಹಿಸಿದರು ಎಂದು ಢಾಕಾ ಟ್ರಿಬ್ಯೂನ್ ದೈನಿಕ ವರದಿ ಮಾಡಿದೆ.
ವಂಗಬಂಧು ಅವೆನ್ಯೂದಲ್ಲಿರುವ ಅವಾಮಿ ಲೀಗ್ ಪಕ್ಷದ ಕೇಂದ್ರ ಕಚೇರಿಗೆ ಪ್ರತಿಭಟನಕಾರರು ಸೋಮವಾರ ರಾತ್ರಿ ಬೆಂಕಿ ಹಚ್ಚಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.