ದೋಹಾ: ಉತ್ತರ ಇರಾನ್‌ನಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಘಟನೆಯಲ್ಲಿ 32 ಮಂದಿ ಸಾವಿಗೀಡಾಗಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಗಿಲಾನ್‌ನ ಕ್ಯಾಸ್ಪಿಯನ್ ಸಮುದ್ರ ಪ್ರಾಂತ್ಯದ ಲಾಂಗರುಡ್‌ನಲ್ಲಿರುವ ಮಾದಕ ದ್ರವ್ಯ ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ.
ಘಟನೆ ಸಂಬಂಧ ಪುನರ್ವಸತಿ ಕೇಂದ್ರದ ಮ್ಯಾನೇಜರ್ ಸೇರಿದಂತೆ ಇತರರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇರಾನ್ ವಿಶ್ವದಲ್ಲೇ ಅತ್ಯಂತ ತೀವ್ರವಾದ ವ್ಯಸನ ಸಮಸ್ಯೆಗಳನ್ನು ಎದುರಿಸುತ್ತಿರುವ ರಾಷ್ಟ್ರವಾಗಿದೆ ಎಂದು ಯುನೈಟೆಡ್ ನೇಷನ್ಸ್ ಆಫೀಸ್ ಆಫ್ ಡ್ರಗ್ಸ್ ಆ್ಯಂಡ್ ಕ್ರೈಮ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.