ADVERTISEMENT

ಬಾಂಗ್ಲಾದೇಶದ ಅತಿದೊಡ್ಡ ಜವಳಿ ಮಾರುಕಟ್ಟೆಗೆ ಬೆಂಕಿ

ಪಿಟಿಐ
Published 4 ಏಪ್ರಿಲ್ 2023, 6:30 IST
Last Updated 4 ಏಪ್ರಿಲ್ 2023, 6:30 IST
ಮಾರುಕಟ್ಟೆಗೆ ಬೆಂಕಿ ಬಿದ್ದಿರುವುದು (ಪಿಟಿಐ ಚಿತ್ರ)
ಮಾರುಕಟ್ಟೆಗೆ ಬೆಂಕಿ ಬಿದ್ದಿರುವುದು (ಪಿಟಿಐ ಚಿತ್ರ)   

ಢಾಕಾ: ಬಾಂಗ್ಲಾದೇಶದ ಅತಿದೊಡ್ಡ ಬಟ್ಟೆ ಮಾರುಕಟ್ಟೆಗಳಲ್ಲಿ ಒಂದಾದ 'ಬಂಗಾಬಜಾರ್‌'ನಲ್ಲಿ ಮಂಗಳವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಧಾನಿ ಢಾಕಾದಲ್ಲಿರುವ ಈ ಮಾರುಕಟ್ಟೆಯಲ್ಲಿ ಬೆಳಿಗ್ಗೆ 6.10ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಸಾವು–ನೋವಿನ ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿರುವುದಾಗಿ 'ಢಾಕಾ ಟ್ರಿಬ್ಯೂನ್‌' ಪತ್ರಿಕೆ ವರದಿ ಮಾಡಿದೆ.

ದುರಂತಕ್ಕೆ ಕಾರಣವೇನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬೆಂಕಿ ನಂದಿಸಲು 47 ಅಗ್ನಿಶಾಮಕ ಘಟಕಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಗ್ನಿಶಾಮಕ ಸೇವೆ ಮತ್ತು ನಾಗರಿಕ ರಕ್ಷಣಾ ನಿಯಂತ್ರಣ ಕೊಠಡಿಯ ಅಧಿಕಾರಿ ರಫಿ ಅಲ್‌ ಫಾರುಕ್‌ ಹೇಳಿಕೆ ನೀಡಿದ್ದಾರೆ.

ADVERTISEMENT

ಮಾರುಕಟ್ಟೆಯಲ್ಲಿನ ಮಳಿಗೆಗಳ ಮಾಲೀಕರು ಮತ್ತು ಸಿಬ್ಬಂದಿ, ಬೆಂಕಿ ಬಿದ್ದಿರುವ ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ್ದಾರೆ. ತಮ್ಮ ಮಳಿಗೆಗಳಿಂದ ಬಟ್ಟೆಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.