ADVERTISEMENT

ಪಾಕಿಸ್ತಾನದಲ್ಲಿ ಸ್ಫೋಟ: ಶಾಲಾ ಮಕ್ಕಳು, ಪೊಲೀಸ್ ಸಿಬ್ಬಂದಿ ಸೇರಿ 7 ಮಂದಿ ಸಾವು

ರಾಯಿಟರ್ಸ್
Published 1 ನವೆಂಬರ್ 2024, 10:25 IST
Last Updated 1 ನವೆಂಬರ್ 2024, 10:25 IST
<div class="paragraphs"><p>ಸ್ಫೋಟ</p></div>

ಸ್ಫೋಟ

   

–ಪಿಟಿಐ ಚಿತ್ರ

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಇಂದು (ಶುಕ್ರವಾರ) ಮುಂಜಾನೆ ಸಂಭವಿಸಿದ ಸ್ಫೋಟದಲ್ಲಿ ಐದು ಶಾಲಾ ಮಕ್ಕಳು, ಒಬ್ಬ ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ADVERTISEMENT

ಬಲೂಚಿಸ್ತಾನ್ ಪ್ರಾಂತ್ಯದ ಮಸ್ತುಂಗ್ ಜಿಲ್ಲೆಯ ಸಿವಿಲ್ ಆಸ್ಪತ್ರೆ ಚೌಕ್‌ನಲ್ಲಿರುವ ಶಾಲೆಯೊಂದರ ಬಳಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಈವರೆಗೆ 7 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

‘ಬೈಕ್‌ಗೆ ಜೋಡಿಸಲಾದ ಐಇಡಿ (ಸುಧಾರಿತ ಸ್ಫೋಟಕ ಸಾಮಗ್ರಿ) ಅನ್ನು ರಿಮೋಟ್‌ ಮೂಲಕ ಸ್ಫೋಟಿಸಲಾಗಿದೆ. ಘಟನೆಯಲ್ಲಿ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಕಲಾತ್ ವಿಭಾಗದ ಕಮಿಷನರ್ ನಯೀಮ್ ಬಜಾಯ್ ತಿಳಿಸಿದ್ದಾರೆ.

ಸ್ಫೋಟದಿಂದಾಗಿ ಪೊಲೀಸ್ ವ್ಯಾನ್ ಸೇರಿದಂತೆ ಇತರೆ ವಾಹನಗಳಿಗೆ ಹಾನಿಯಾಗಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.