ಟೆಹರಾನ್:ಇರಾನ್‌ನ ಬರಪೀಡಿತ ದಕ್ಷಿಣ ಫಾರ್ಸ್ ಪ್ರಾಂತ್ಯದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಕನಿಷ್ಠ 17 ಜನರು ಮೃತಪಟ್ಟಿದ್ದಾರೆ ಎಂದು ಶನಿವಾರ ವರದಿಯಾಗಿದೆ.
ಭಾರಿ ಮಳೆಯಿಂದಾಗಿಎಸ್ತಾಬಾನ್ ನಗರದ ರೌದ್‌ಬಾಲ್ ನದಿಯಲ್ಲಿ ಪ್ರವಾಹ ಉಂಟಾಗಿದೆ.ರಕ್ಷಣಾ ಕಾರ್ಯಾಚರಣೆ ನಡೆಸಿ 55 ಜನರನ್ನು ರಕ್ಷಿಸಲಾಗಿದೆ. ಕನಿಷ್ಠ 6 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಲ್ಲಿನ ಗವರ್ನರ್ ಯೂಸೆಫ್ ಕರೆಗರ್ ತಿಳಿಸಿದ್ದಾರೆ.
ದಶಕಗಳಿಂದಲೂ ಬರ ಪರಿಸ್ಥಿತಿ ಎದುರಿಸುತ್ತಿರುವ ದೇಶದಲ್ಲಿಹವಾಮಾನ ವೈಪರೀತ್ಯದ ಪರಿಣಾಮವಾಗಿಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಇರಾನ್ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫಾರ್ಸ್ ಪ್ರಾಂತ್ಯದಲ್ಲಿ2018ರಮಾರ್ಚ್‌ನಲ್ಲಿ ಉಂಟಾಗಿದ್ದ ಹಠಾತ್ ಪ್ರವಾಹದಿಂದ 44 ಮಂದಿ ಸಾವಿಗೀಡಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.