ADVERTISEMENT

ಇಂಡೊನೇಷ್ಯಾ: ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು

ಏಜೆನ್ಸೀಸ್
Published 4 ಮೇ 2024, 12:18 IST
Last Updated 4 ಮೇ 2024, 12:18 IST
<div class="paragraphs"><p>ಇಂಡೊನೇಷ್ಯಾದ ದಕ್ಷಿಣ ಸುಲವೆಸಿ ದ್ವೀಪದ ವಾಜೊ ಎಂಬ ಪ್ರದೇಶದಲ್ಲಿ ಪ್ರವಾಹದಿಂದ ಪೀಡಿತ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು  </p></div>

ಇಂಡೊನೇಷ್ಯಾದ ದಕ್ಷಿಣ ಸುಲವೆಸಿ ದ್ವೀಪದ ವಾಜೊ ಎಂಬ ಪ್ರದೇಶದಲ್ಲಿ ಪ್ರವಾಹದಿಂದ ಪೀಡಿತ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು

   

–ಪಿಟಿಐ ಚಿತ್ರ 

ಜಕಾರ್ತ(ಇಂಡೊನೇಷ್ಯಾ): ಇಂಡೊನೇಷ್ಯಾದ ಸುಲವೆಸಿ ದ್ವೀಪದಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಸುಮಾರು 14 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ADVERTISEMENT

ಗುರುವಾರದಿಂದ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದಾಗಿ  ದಕ್ಷಿಣ ಸುಲವೇಸಿ ಪ್ರಾಂತ್ಯದ ಲುವು ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದೆ ಎಂದು ಸ್ಥಳೀಯ ರಕ್ಷಣಾ ಮುಖ್ಯಸ್ಥ ಮೆಕ್ಸಿಯಾನಸ್ ಬೆಕಾಬೆಲ್ ಹೇಳಿದ್ದಾರೆ.

ಜಿಲ್ಲೆಯ ಹಲವು ವಸತಿಪ್ರದೇಶಗಳಲ್ಲಿ ಪ್ರವಾಹದಿಂದಾಗಿ 10 ಅಡಿಗಳಷ್ಟು ಎತ್ತರಕ್ಕೆ ನೀರು ನಿಂತಿದ್ದ ಪರಿಣಾಮ ಸಾವಿರಕ್ಕೂ ಅಧಿಕ ಮನೆಗಳಿಗೆ ಧಕ್ಕೆಯಾಗಿದೆ. 42 ಮನೆಗಳು ಕೊಚ್ಚಿಕೊಂಡು ಹೋಗಿವೆ ಎಂದು ತಿಳಿಸಿದ್ದಾರೆ.

ಪ್ರವಾಹದಿಂದ ತೊಂದರೆ ಸಿಲುಕಿದವರನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ ವಕ್ತಾರ ಅಬ್ದುಲ್ ಮುಹಾರಿ ಶನಿವಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.