ಬೀಜಿಂಗ್: ಚೀನಾದ ಆಗ್ನೇಯ ಭಾಗದಲ್ಲಿರುವ ಫುಜಿಯಾನ್ ಪ್ರಾಂತ್ಯಕ್ಕೆ ಅಪ್ಪಳಿಸಿರುವ ‘ಹೈಕುಯ್’ ಚಂಡಮಾರುತಕ್ಕೆ ಇಬ್ಬರು ಮೃತರಾಗಿದ್ದು, ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ವಿಮಾನ, ಬಸ್ಸು, ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಅಂದಾಜು 30,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಮೃತರಾಗಿದ್ದು, ಪೊಲೀಸ್ ಅಧಿಕಾರಿಯೊಬ್ಬರು ಕಾಣೆಯಾಗಿದ್ದಾರೆ ಎಂದು ಫುಜೌಹ್ ಅಗ್ನಿಶಾಮಕ ಇಲಾಖೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.