ADVERTISEMENT

ನೇಪಾಳ | ಭಾರಿ ಮಳೆಯಿಂದ ಪ್ರವಾಹ, ಭೂಕುಸಿತ: 59 ಮಂದಿ ಸಾವು

ಪಿಟಿಐ
Published 28 ಸೆಪ್ಟೆಂಬರ್ 2024, 13:00 IST
Last Updated 28 ಸೆಪ್ಟೆಂಬರ್ 2024, 13:00 IST
<div class="paragraphs"><p>ಕಠ್ಮಂಡುವಿನಲ್ಲಿ ಭಾರಿ&nbsp;ಮಳೆಯಿಂದಾಗಿ ಉಕ್ಕಿ ಹರಿಯುತ್ತಿರುವ ಬಾಗ್ಮತಿ ನದಿ.</p><p>&nbsp;</p></div>

ಕಠ್ಮಂಡುವಿನಲ್ಲಿ ಭಾರಿ ಮಳೆಯಿಂದಾಗಿ ಉಕ್ಕಿ ಹರಿಯುತ್ತಿರುವ ಬಾಗ್ಮತಿ ನದಿ.

 

   

(ರಾಯಿಟರ್ಸ್ ಚಿತ್ರ)

ADVERTISEMENT

ಕಠ್ಮಂಡು: ನಿರಂತರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ ನೇಪಾಳದಲ್ಲಿ ಕನಿಷ್ಠ 59 ಜನ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಶುಕ್ರವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ದೇಶದ (ನೇಪಾಳ) ಕೆಲವು ಭಾಗಗಳು ಜಲಾವೃತಗೊಂಡಿವೆ.

'ನಿರಂತರ ಮಳೆಯಿಂದಾಗಿ 59 ಮಂದಿ ಸಾವಿಗೀಡಾಗಿದ್ದಾರೆ. ಅವರಲ್ಲಿ 34 ಮಂದಿ ಕಠ್ಮಂಡು ಕಣಿವೆಯಲ್ಲಿಯೇ ಮೃತಪಟ್ಟಿದ್ದಾರೆ. 36 ಜನ ಗಾಯಗೊಂಡಿದ್ದಾರೆ' ಎಂದು ನೇಪಾಳ ಪೊಲೀಸರ ಉಪ ವಕ್ತಾರ ಬಿಷ್ಣೋ ಅಧಿಕಾರಿ ತಿಳಿಸಿದ್ದಾರೆ.

ಪ್ರವಾಹದಲ್ಲಿ ಒಟ್ಟು 44 ಮಂದಿ ನಾಪತ್ತೆಯಾಗಿದ್ದಾರೆ. ಸಾವಿರಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ದೇಶದಾದ್ಯಂತ 44 ಸ್ಥಳಗಳಲ್ಲಿ ಪ್ರಮುಖ ಹೆದ್ದಾರಿಗಳನ್ನು ಬಂದ್‌ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕಠ್ಮಂಡುವಿನಲ್ಲಿ ಸುಮಾರು 226 ಮನೆಗಳು ಮುಳುಗಡೆಯಾಗಿವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸುಮಾರು 3,000 ಭದ್ರತಾ ಸಿಬ್ಬಂದಿಯ ರಕ್ಷಣಾ ತಂಡವನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.