ಇಸ್ಲಾಮಾಬಾದ್: ಭಾರಿ ಮಳೆ ಪರಿಣಾಮ ಉಂಟಾದ ಪ್ರವಾಹದಿಂದಾಗಿ ಅಪಾರ ಸಾವು–ನೋವು ಸಂಭವಿಸಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.
ಪ್ರವಾಹದಿಂದಾಗಿ ಈವರೆಗೆ 343 ಮಕ್ಕಳು ಸೇರಿ 937 ಜನರು ಸಾವನ್ನಪ್ಪಿದ್ದಾರೆ. ಕನಿಷ್ಠ ಮೂರು ಕೋಟಿ ಜನರು ಸೂರು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
‘ದೇಶದಾದ್ಯಂತ ತ್ವರಿತವಾಗಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುವ ಸಲುವಾಗಿ ವಾರ್‌ರೂಂ ಸ್ಥಾಪಿಸಲಾಗಿದೆ. ಭಾರಿ ಮಳೆ ಕಾರಣರಕ್ಷಣಾ ಕಾರ್ಯ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ’ ಎಂದು ಹವಾಮಾನ ಬದಲಾವಣೆ ಸಚಿವೆ ಶೆರ‍್ರಿ ರೆಹಮಾನ್ ತಿಳಿಸಿದ್ದಾರೆ.
‘ಸಿಂಧ್ ಪ್ರಾಂತ್ಯದಲ್ಲಿ ಹೆಚ್ಚು ಮಂದಿ ಸತ್ತಿದ್ದಾರೆ. ಜೂನ್ 14ರಿಂದ ಈ ವರೆಗೆ ಮಳೆ ಸಂಬಂಧಿತ ಅವಘಡ ಹಾಗೂ ಪ್ರವಾಹದಿಂದಾಗಿ ಸಿಂಧ್ ಪ್ರಾಂತ್ಯದಲ್ಲಿ 306 ಜನರು ಮೃತಪಟ್ಟಿದ್ದಾರೆ’ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.