ಕ್ವೀನ್ಸ್‌ಲ್ಯಾಂಡ್: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮಿಖಾಯಿಲ್ ಸ್ಲೇಟರ್ ಅವರ ವಿರುದ್ಧ ಇಲ್ಲಿನ ಸನ್‌ಶೈನ್ ತೀರ ಪ್ರದೇಶದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ.
ಪೊಲೀಸರು ಕೌಟುಂಬಿಕ ದೌರ್ಜನ್ಯ ಹಾಗೂ ವೈದ್ಯಕೀಯ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಸಲುವಾಗಿ ನೂಸಾ ಹೆಡ್ಸ್ ಪಟ್ಟಣಕ್ಕೆ ಶುಕ್ರವಾರ ಮಧ್ಯರಾತ್ರಿ ಆಗಮಿಸಿದ್ದರು. ಈ ವೇಳೆ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 53 ವರ್ಷದ ಸ್ಲೇಟರ್ ಅವರನ್ನು ಬಂಧಿಸಲಾಗಿತ್ತು ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.
ಪೊಲೀಸರನ್ನು ಸ್ಲೇಟರ್ ತಡೆದಿದ್ದಾರೆ. ಈ ವೇಳೆ ಪರಸ್ಪರ ವಾಗ್ವಾದ ನಡೆದು, ಹಲ್ಲೆ ಮಾಡಿದ್ದಾರೆ. ಪೊಲೀಸ್ ಸಿಬ್ಬಂದಿಯೊಬ್ಬರ ಕೈಗೆ ಕತ್ತರಿಸಿದ ಗಾಯವಾಗಿದೆ ಎಂದು ಕ್ವೀನ್ಸ್‌ಲ್ಯಾಂಡ್ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಸ್ಲೇಟರ್ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಹಾಗೂ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ. ಮೇ 2ರಂದು ವಿಚಾರಣೆಗೆ ಹಾಜರಾಗುವಂತೆ ಆದೇಶಿಸಲಾಗಿದೆ.
ಆಸ್ಟ್ರೇಲಿಯಾ ಪರ 74 ಟೆಸ್ಟ್ ಪಂದ್ಯಗಳನ್ನು ಆಡಿರುವ ಸ್ಲೇಟರ್ 5,312ರನ್ ಗಳಿಸಿದ್ದಾರೆ. 42 ಏಕದಿನ ಪಂದ್ಯಗಳಿಂದ 987 ರನ್ ಗಳಿಸಿದ್ದಾರೆ. ಅವರು 2004ರಲ್ಲಿ ಕ್ರಿಕೆಟ್‌ಗೆ ವಿದಾಯ ಹೇಳಿದರು. ಬಳಿಕ ಚಾನೆಲ್ 7 ಮತ್ತು ಚಾನೆಲ್ 9 ವೀಕ್ಷಕ ವಿವರಣೆಗಾರರಾಗಿ ಜರ್ನಿ ಮುಂದುವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.