ಲಹೋರ್: ಪಾಕಿಸ್ತಾನದ ಆಡಳಿತಾರೂಢ ಪಾಕಿಸ್ತಾನ್ ಮುಸ್ಲಿಂ ಲೀಗ್– ನವಾಜ್ (ಪಿಎಂಎಲ್– ಎನ್) ಪಕ್ಷದ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಅವಿರೋಧವಾಗಿ ಮಂಗಳವಾರ ಆಯ್ಕೆ ಆದರು.
ಪನಾಮ ಪೇಪರ್ ಹಗರಣಕ್ಕೆ ಸಂಧಿಸಿದಂತೆ ಆದೇಶ ನೀಡಿದ್ದ ಅಲ್ಲಿಯ ಸುಪ್ರೀಂ ಕೋರ್ಟ್, ನವಾಜ್ ಅವರಿಗೆ ಆ ಹುದ್ದೆಯಿಂದ ತೊರೆಯುವಂತೆ ಸೂಚಿಸಿತ್ತು.
ನಾಲ್ಕು ವರ್ಷಗಳ ಕಾಲ ಬ್ರಿಟನ್‌ನಲ್ಲಿ ನೆಲೆಸಿದ್ದ ಷರೀಫ್ ಅವರು ಕಳೆದ ವರ್ಷ ಅಕ್ಟೋಬರ್‌ನಲ್ಲಿ ದೇಶಕ್ಕೆ ಮರಳಿದ್ದರು. ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಭಾಗವಹಿಸದೆಯೇ ಅವರು ಆರು ವರ್ಷಗಳ ನಂತರ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.