ADVERTISEMENT

ರಷ್ಯಾ ನದಿಯಲ್ಲಿ ಮುಳುಗಿ ಮೃತಪಟ್ಟ ಭಾರತದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳು

ಪಿಟಿಐ
Published 7 ಜೂನ್ 2024, 6:34 IST
Last Updated 7 ಜೂನ್ 2024, 6:34 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಮಾಸ್ಕೊ: ಭಾರತದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳು ರಷ್ಯಾದ ಸೇಂಟ್‌ ಪೀಟರ್ಸ್‌ಬರ್ಗ್‌ ಸಮೀಪದ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಶವಗಳನ್ನು ಸಂಬಂಧಿಕರಿಗೆ ಒಪ್ಪಿಸಲು ರಷ್ಯಾ ಆಡಳಿತದೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ.

ಮೃತಪಟ್ಟವರು 18–20 ವಯೋಮಾನದವರಾಗಿದ್ದು, ಇಬ್ಬರು ಯುವಕರು ಮತ್ತು ಇನ್ನಿಬ್ಬರು ಯುವತಿಯರು. ಇವೆರೆಲ್ಲ ವಿಲಿಕಿ ನವ್‌ಗೊರೊಡ್‌ನಲ್ಲಿರುವ ನವ್‌ಗೊರೊಡ್ ಸ್ಟೇಟ್‌ ಯೂನಿವರ್ಸಿಟಿಯಲ್ಲಿ ಓದುತ್ತಿದ್ದರು.

ADVERTISEMENT

ವೊಲ್ಖೊವ್‌ ನದಿ ತೀರದಲ್ಲಿದ್ದ ವಿದ್ಯಾರ್ಥಿನಿಯೊಬ್ಬರು ಅಪಾಯಕ್ಕೆ ಸಿಲುಕಿದ್ದರು. ಅದನ್ನು ನೋಡಿದ ಆಕೆಯ ನಾಲ್ವರು ಸ್ನೇಹಿತರು ನೆರವಿಗೆ ಧಾವಿಸಿದರು. ಆದರೆ, ಅಪಾಯದಲ್ಲಿದ್ದ ವಿದ್ಯಾರ್ಥಿನಿ ಹಾಗೂ ಆಕೆಯನ್ನು ರಕ್ಷಿಸಲು ಹೋದ ನಾಲ್ವರಲ್ಲಿ ಮೂವರು ನೀರು ಪಾಲಾಗಿದ್ದಾರೆ. ಉಳಿದ ಒಬ್ಬನನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

'ಮೃತದೇಹಗಳನ್ನು ಸಾಧ್ಯವಾದಷ್ಟು ಬೇಗನೆ ಸಂಬಂಧಿಕರಿಗೆ ಕಳುಹಿಸಲು ಪ್ರಯತ್ನಿಸುತ್ತಿದ್ದೇವೆ. ರಕ್ಷಿಸಲಾಗಿರುವ ವಿದ್ಯಾರ್ಥಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ' ಎಂದು ಮಾಸ್ಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌/ಟ್ವಿಟರ್‌ನಲ್ಲಿ ತಿಳಿಸಿದೆ.

ಮೃತ ವಿದ್ಯಾರ್ಥಿಗಳ ಕುಟುಂಬದವರಿಗೆ ಸಂತಾಪ ಸೂಚಿಸಿದ್ದು, ವಿದ್ಯಾರ್ಥಿಗಳು ನವ್‌ಗೊರೊಡ್ ಸ್ಟೇಟ್‌ ಯೂನಿವರ್ಸಿಟಿಯಲ್ಲಿ ಓದುತ್ತಿದ್ದರು ಎಂದು ತಿಳಿಸಿದೆ. ಮೃತರ ಕುಟುಂಬದವರನ್ನು ಸಂಪರ್ಕಿಸಲಾಗಿದೆ. ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದೇವೆ ಎಂದೂ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.