ಕಠ್ಮಂಡು: ನೇಪಾಳದ ಪೊಖರಾದಲ್ಲಿ 72 ಜನರಿದ್ದ ಯೇತಿ ಏರ್‌ಲೈನ್ಸ್‌ಗೆ ಸೇರಿದ ಎಟಿಆರ್–72 ವಿಮಾನ ಪತನದ ಬಗ್ಗೆ ತನಿಖೆ ನಡೆಸಲು ಸರ್ಕಾರಕ್ಕೆ ಸಹಾಯ ಮಾಡಲು ಫ್ರಾನ್ಸ್ ತಜ್ಞರ ತಂಡ ಬುಧವಾರ ಪೊಖರಾಗೆ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಖರಾದಲ್ಲಿರುವ ಏರ್‌ಲೈನ್ಸ್ ಸಿಬ್ಬಂದಿ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಒಂಬತ್ತು ಸದಸ್ಯರ ತಂಡ ವಿಚಾರಣೆ ನಡೆಸುತ್ತಿದೆ. ಅಪಘಾತದ ತನಿಖೆಗಾಗಿ ನೇಪಾಳ ಸರ್ಕಾರ ಐದು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದೆ. ಮಾಜಿ ವಿಮಾನಯಾನ ಕಾರ್ಯದರ್ಶಿ ನಾಗೇಂದ್ರ ಘಿಮಿರೆ ನೇತೃತ್ವದ ತನಿಖಾ ಸಮಿತಿಯು ಅಪಘಾತದ ಬಗ್ಗೆ ತನಿಖೆ ನಡೆಸಿ 45 ದಿನಗಳಲ್ಲಿ ವರದಿ ಸಲ್ಲಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.