ಜೆರುಸಲೇಂ: ಇಸ್ರೇಲ್-ಹಮಾಸ್ ಸಂಘರ್ಷದ ನಡುವೆಯೇ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಇಸ್ರೇಲ್‌ನ ಟೆಲ್ ಅವಿವ್‌ಗೆ ಇಂದು ಬಂದಿಳಿದ್ದಾರೆ.
ಮ್ಯಾಕ್ರನ್ ಅವರ ಇಸ್ರೇಲ್ ಭೇಟಿ ಮಹತ್ತರದಾಗಿದ್ದು, ಇಸ್ರೇಲ್‌ಗೆ ನೆರವು ನೀಡುವ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಇಸ್ರೇಲ್‌ನ ಸ್ಥಳೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಹಮಾಸ್ ದಾಳಿಯ ಬೆನ್ನಲ್ಲೇ ಫ್ರೆಂಚ್ ಇಸ್ರೇಲ್‌ಗೆ ತನ್ನ ಬೆಂಬಲವನ್ನು ಘೋಷಿಸಿತ್ತು.
ಏತನ್ಮಧ್ಯೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ದೂರವಾಣಿ ಮೂಲಕ ಮಾತನಾಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, ಮಾನವೀಯ ನೆಲೆಯಲ್ಲಿ ಗಾಜಾಕ್ಕೆ ನೆರವು ನೀಡುವುದನ್ನು ಮುಂದುವರಿಸುವುದಾಗಿ ಮತ್ತು ಹಮಾಸ್ ಬಂಡುಕೋರರ ವಿರುದ್ಧ ಹೋರಾಡುತ್ತಿರುವ ಇಸ್ರೇಲ್‌ಗೆ ಹೆಚ್ಚಿನ ಬೆಂಬಲ ನೀಡಿರುವುದಾಗಿ ತಿಳಿಸಿದ್ದಾರೆ.
ಎರಡು ದಿನದ ಹಿಂದೆ ಜೋ ಬೈಡನ್ ಇಸ್ರೇಲ್‌ಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದರು. ಇದುವರೆಗೆ ಒಟ್ಟು ನಾಲ್ಕು ಮಂದಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.