ADVERTISEMENT

ಬ್ಯಾಂಕ್ ವಂಚನೆ ಪ್ರಕರಣ: ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಡೊಮಿನಿಕಾದಲ್ಲಿ ಬಂಧನ

ಪಿಟಿಐ
Published 26 ಮೇ 2021, 18:24 IST
Last Updated 26 ಮೇ 2021, 18:24 IST
ಮೆಹುಲ್ ಚೋಕ್ಸಿ
ಮೆಹುಲ್ ಚೋಕ್ಸಿ   

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ಬುಧವಾರ ವರದಿ ಮಾಡಿದೆ.

ಆಂಟಿಗುವಾ ಮತ್ತು ಬಾರ್ಬುಡಾದಿಂದಲೂಚೋಕ್ಸಿ ನಾಪತ್ತೆಯಾಗಿದ್ದ. ಚೋಕ್ಸಿ ವಿರುದ್ಧ ಇಂಟರ್‌ಪೋಲ್‌ ಯೆಲ್ಲೋ ನೋಟಿಸ್‌ ಜಾರಿಗೊಳಿಸಿತ್ತು. ಈತನ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದರು. ಮಂಗಳವಾರ ರಾತ್ರಿ ಬಂಧಿಸಲಾಗಿದೆ.

ಆಂಟಿಗುವಾ ಮತ್ತು ಬಾರ್ಬುಡಾದ ರಾಯಲ್ ಪೊಲೀಸ್ ಪಡೆಗೆ ಚೋಕ್ಸಿಯನ್ನು ಹಸ್ತಾಂತರಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ADVERTISEMENT

ಆಂಟಿಗುವಾ ಮತ್ತು ಬಾರ್ಬುಡಾದ ಪೌರತ್ವ ಪಡೆದಿರುವ ಚೋಕ್ಸಿ 2018 ರಿಂದ ಅಲ್ಲಿಯೇ ವಾಸ್ತವ್ಯ ಹೂಡಿದ್ದ. ದ್ವೀಪದ ದಕ್ಷಿಣ ಪ್ರದೇಶದಲ್ಲಿ ಭಾನುವಾರ ತನ್ನ ವಾಹನದಲ್ಲಿ ಕಾಣಿಸಿಕೊಂಡಿದ್ದ. ನಂತರ, ಆತನ ವಾಹನ ಮಾತ್ರ ಪತ್ತೆಯಾಗಿದೆ. ಭಾನುವಾರದಿಂದ ಚೋಕ್ಸಿ ಸುಳಿವು ಸಿಕ್ಕಿಲ್ಲ ಎಂದು ಅವರ ವಕೀಲ ವಿಜಯ್‌ ಅಗ್ರವಾಲ್‌ ದೃಢಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.