ಟುರಿನ್: 2035ರ ವೇಳೆಗೆ ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸುವ ಬಗ್ಗೆ ಜಿ7 ಸದಸ್ಯ ರಾಷ್ಟ್ರಗಳ ಇಂಧನ ಸಚಿವರು ಇಟಲಿಯಲ್ಲಿ ನಡೆಸಿದ ಸಭೆಯಲ್ಲಿ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷ ದುಬೈನಲ್ಲಿ ನಡೆದ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ಸಮಾವೇಶದಲ್ಲಿ (ಸಿಒಪಿ28) ಕಲ್ಲಿದ್ದಲು ಮಾಲಿನ್ಯಕಾರಕ ಎಂದು ನಿರ್ಧರಿಸಿದ ಹಿನ್ನೆಲೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು ಎಂದು ಗೊತ್ತಾಗಿದೆ.
‘ಜಿ7 ಸದಸ್ಯ ರಾಷ್ಟ್ರಗಳಾದ ಇಟಲಿ, ಅಮೆರಿಕ, ಬ್ರಿಟನ್, ಫ್ರಾನ್ಸ್, ಜರ್ಮನಿ, ಕೆನಡಾ ಮತ್ತು ಜಪಾನ್‌ನ ರಾಜತಾಂತ್ರಿಕ ಅಧಿಕಾರಿಗಳು ಈ ಬಗ್ಗೆ ಚರ್ಚೆ ನಡೆಸಿದರು. ಆದರೆ, ಒಂದು ರಾಷ್ಟ್ರ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿತು’ ಎಂದು ಮೂಲಗಳು ತಿಳಿಸಿವೆ.
ಟುರಿನ್‌ನಲ್ಲಿ ಸೋಮವಾರ ಜಮಾಯಿಸಿದ್ದ ಕೆಲವರು, ಜಿ7 ನಾಯಕರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ, ‘ಇವರು ಹವಾಮಾನ ವೈಪರಿತ್ಯದ ವಿರುದ್ಧ ಹೋರಾಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.