ಕೊಲಂಬೊ: ಮಾನವ ಹಕ್ಕುಗಳ ಉಲ್ಲಂಘನೆ ಆರೋಪ ಎದುರಿ ಸುತ್ತಿರುವ ಲೆಫ್ಟಿನೆಂಟ್ ಜನರಲ್ ಶವೇಂದ್ರ ಸಿಲ್ವಾ ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ನೇಮಿಸಿ ಶ್ರೀಲಂಕಾ ಅಧ್ಯಕ್ಷರ ಕಚೇರಿ ಆದೇಶ ಹೊರಡಿಸಿದೆ.
ಲೆಫ್ಟಿನೆಂಟ್ ಜನರಲ್ ಮಹೇಶ್ ಸೇನನಾಯ್ಕೆ ಅವರ ಸೇವಾವಧಿಯನ್ನು ವಿಸ್ತರಣೆ ಆಗದೇ ಇರುವ ಕಾರಣ, ವಿವಾದಗಳಿಂದಲೇ ಸುತ್ತುವರಿದಿರುವ ಸಿಲ್ವಾ ಅವರು ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಎಲ್‌ಟಿಟಿಇ ವಿರುದ್ಧ 2009ರಲ್ಲಿ ನಡೆದ ಅಂತಿಮ ಯುದ್ಧದಲ್ಲಿ ಸಿಲ್ವಾ ಸೇನೆಯ 58ನೇ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಈ ಸಂದರ್ಭದಲ್ಲಿ ನಾಗರಿಕರು, ಆಸ್ಪತ್ರೆ ಮೇಲೆ ದಾಳಿ ನಡೆಸಿದ ಆರೋಪ ಇವರ ಮೇಲಿದೆ.
ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ 2013ರಲ್ಲಿ ಅಂಗೀಕರಿಸಿದ ನಿರ್ಣಯದಲ್ಲೂ ಸಿಲ್ವಾ ಅವರ ಹೆಸರು ಕೇಳಿಬಂದಿತ್ತು. ವಿಶ್ವಸಂಸ್ಥೆಯ ವರದಿ ಪ್ರಕಾರ ಯುದ್ಧ ಅಂತ್ಯವಾಗುವ ಸಂದರ್ಭದಲ್ಲಿ ಅಂದಾಜು 45 ಸಾವಿರ ತಮಿಳು ನಾಗರಿಕರನ್ನು ಹತ್ಯೆ ಮಾಡಲಾಗಿತ್ತು ಎಂದು ಉಲ್ಲೇಖಿಸಲಾಗಿದೆ.
ಆದರೆ ಇದನ್ನು ಶ್ರೀಲಂಕಾ ಸೇನೆ ತಿರಸ್ಕರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.