ದಾವೋಸ್: ಜಾಗತಿಕ ಮಟ್ಟದಲ್ಲಿ ಸೃಷ್ಟಿಯಾಗಿರುವ ಹವಾಮಾನ ಬಿಕ್ಕಟ್ಟಿನ ಪರಿಹಾರಕ್ಕೆ ಸಂಬಂಧಿಸಿದಂತೆ ಎಲ್ಲಾ ರಾಷ್ಟ್ರಗಳ ನಡುವೆ ಒಮ್ಮತ ಮೂಡಬೇಕಿದೆ ಎಂದು ವಿಶ್ವ ಆರ್ಥಿಕ ವೇದಿಕೆಯ ವರದಿಯು ಪ್ರತಿಪಾದಿಸಿದೆ.
ಇಲ್ಲವಾದರೆ 2050ರ ವೇಳೆಗೆ ಜಾಗತಿಕ ಆರ್ಥಿಕತೆಗೆ ₹1,039 ಲಕ್ಷ ಕೋಟಿ ನಷ್ಟವಾಗಲಿದೆ. 14.5 ದಶಲಕ್ಷ ಸಾವುಗಳಿಗೂ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದೆ.
ಹವಾಮಾನ ಬದಲಾವಣೆಯಿಂದ ಆರೋಗ್ಯದ ಮೇಲಾಗುವ ಪರಿಣಾಮಗಳನ್ನು ತಗ್ಗಿಸಬೇಕಿದೆ. ಇದರ ವಿರುದ್ಧ ಕಾರ್ಯತಂತ್ರದ ಕ್ರಮ ಅನುಸರಿಸಲು ಜಾಗತಿಕ ಮಧ್ಯಸ್ಥಗಾರರಿಗೆ ಇನ್ನೂ ಸಮಯವಿದೆ ಎಂದು ಹೇಳಿದೆ.
ಜಾಗತಿಕ ಆರ್ಥಿಕತೆ ಮತ್ತು ವಿಶ್ವದಾದ್ಯಂತ ಆರೋಗ್ಯ ವ್ಯವಸ್ಥೆ ಮೇಲೆ ಪರೋಕ್ಷವಾಗಿ ಹವಾಮಾನ ಬದಲಾವಣೆಯು ಬೀರುವ ಪರಿಣಾಮ ಕುರಿತು ವರದಿಯಲ್ಲಿ ವಿವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.