ಮ್ಯಾಡ್ರಿಡ್: ಜಾಗತಿಕ ತಾಪಮಾನಕ್ಕೆ ಕಾರಣವಾಗುವ ಇಂಗಾಲದ ಕುರಿತಂತೆ ಇಲ್ಲಿ ನಡೆದ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆ ’ಸಿಒಪಿ 25’ ಸ್ಪಷ್ಟವಾದ ಒಪ್ಪಂದಕ್ಕೆ ಬರಲು ವಿಫಲವಾಯಿತು.
ಎರಡು ವಾರಗಳ ಕಾಲ ನಡೆದ ಈ ಶೃಂಗಸಭೆ ಭಾನುವಾರ ಮುಕ್ತಾಯವಾಯಿತು. ಸುಮಾರು 200 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದ ಈ ಸಭೆಯಲ್ಲಿ ತಾಪಮಾನ ಹೆಚ್ಚಿಸುವ ಹಸಿರುಮನೆ ಅನಿಲಗಳನ್ನು ನಿಯಂತ್ರಿಸಲು ಮತ್ತು ಹವಾಮಾನ ಬದಲಾವಣೆಯಿಂದ ಸಂಕಷ್ಟಕ್ಕೀಡಾಗುವ ಬಡ ರಾಷ್ಟ್ರಗಳಿಗೆ ನೆರವಾಗುವುದಾಗಿ ಮಾತ್ರ ಘೋಷಿಸಲಾಯಿತು.
ಆದರೆ, ಇಂಗಾಲದ ಹೊರಸೂಸುವಿಕೆ ನಿಯಂತ್ರಣ ಕ್ರಮಗಳ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳಲಿಲ್ಲ. ಈ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿ ದ್ದರಿಂದ ಮುಂದಿನ ಶೃಂಗಸಭೆಯಲ್ಲಿ ನಿರ್ಣಯ ಕೈಗೊಳ್ಳಲು ನಿರ್ಧರಿಸ
ಲಾಯಿತು. ಹವಾಮಾನ ಬದಲಾವಣೆ ನಿಯಂತ್ರಿಸಲು ವಿಶ್ವದ ಶ್ರೀಮಂತ ರಾಷ್ಟ್ರಗಳು ಬದ್ಧತೆ ತೋರುತ್ತಿಲ್ಲ ಎಂದು ಪರಿಸರ ಸಂಘಟನೆಗಳು ಮತ್ತು ಕಾರ್ಯಕರ್ತರು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.