ಸೆಟಿಂಜ್, ಅಮೆರಿಕ: ಮಾಂಟೆನಿಗ್ರೊದ ಸೆಟಿಂಜ್ ಎಂಬ ಪಟ್ಟಣದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಒಬ್ಬ ಪೊಲೀಸ್ ಸೇರಿ ಇತರ ಆರು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ.
ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರು ಈ ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆ. ಗಾಯಗೊಂಡವರ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.