ರಿಯೋ ಡಿ ಜನೈರೋ:ಉತ್ತರ ಬ್ರೆಜಿಲ್‌ನ ಬಾರ್‌ವೊಂದರ ಮೇಲೆ ಭಾನುವಾರ ರಾತ್ರಿ ದುಷ್ಕರ್ಮಿಗಳ ಗುಂಪೊಂದು ಬಂದೂಕಿನಿಂದ ದಾಳಿ ನಡೆಸಿದ್ದು, ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ.
ಬೆಲೆಮ್‌ನಗರದಲ್ಲಿ ಭಾನುವಾರ ರಾತ್ರಿ ಈ ದುರ್ಘಟನೆ ನಡೆದಿದೆ ಎಂದು ಸಾರ್ವಜನಿಕ ಸುರಕ್ಷತಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಆರು ಮಹಿಳೆಯರು ಮತ್ತು ಐವರು ಪುರುಷರು ಅಸುನೀಗಿರುವುದಾಗಿ ಅಲ್ಲಿನ ಸ್ಥಳೀಯ ವೆಬ್‌ಸೈಟ್ ‘ಜಿ1’ ವರದಿ ಮಾಡಿದೆ.
ಬೈಕ್‌ನಲ್ಲಿ ಬಂದ ಏಳು ಮಂದಿ ದುಷ್ಕರ್ಮಿಗಳು ಬಾರ್ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದರು. ನಂತರ ಎಲ್ಲರೂ ಸ್ಥಳದಿಂದ ಪಲಾಯನಗೊಂಡರು. ಗುಂಪಿನಲ್ಲಿದ್ದವರ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಗೆ ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ಈ ವರೆಗೆ ಏನನ್ನೂ ತಿಳಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.