ADVERTISEMENT

ಪಾಕಿಸ್ತಾನ: ಭಾರಿ ಮಳೆ, ಹಿಮಪಾತ–300 ಮನೆಗಳಿಗೆ ಹಾನಿ

ಪಿಟಿಐ
Published 5 ಜನವರಿ 2022, 11:37 IST
Last Updated 5 ಜನವರಿ 2022, 11:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕರಾಚಿ, ಪಾಕಿಸ್ತಾನ: ಪಶ್ಚಿಮ ಪಾಕಿಸ್ತಾನದಲ್ಲಿ ಸುರಿದ ಭಾರಿ ಮಳೆ ಹಾಗೂ ಹಿಮಪಾತದಿಂದಾಗಿ 300ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ತುರ್ತು ರಕ್ಷಣಾ ಕಾರ್ಯಾಚರಣೆಗಳಿಗೆ ಸೇನೆಯನ್ನು ನಿಯೋಜಿಸಲಾಗಿದೆ ಎಂದು ಮಾಧ್ಯಮಗಳು ಬುಧವಾರ ವರದಿ ಮಾಡಿವೆ.

ಸೋಮವಾರ ರಾತ್ರಿ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಚಂಡಮಾರುತ ಅಪ್ಪಳಿಸಿದ ಪರಿಣಾಮ ತಗ್ಗು ಪ್ರದೇಶವಾದ ಮಕ್ರಾನ್‌ ವಿಭಾಗದಲ್ಲಿ ಹೆಚ್ಚು ಹಾನಿಯಾಗಿದೆ. ಅಲ್ಲದೆ, ಗ್ವಾದಾರ್‌ ಪ್ರದೇಶದಲ್ಲಿ ಸೋಮವಾರ ಮತ್ತು ಮಂಗಳವಾರದ 20 ತಾಸುಗಳಲ್ಲಿ 10 ಸೆಂ.ಮೀ. ಮಳೆಯಾಗಿದೆ.

ಮಳೆಯಿಂದ ಗ್ವಾದಾರ್‌ ಮತ್ತು ಕರಾಚಿಯನ್ನು ಸಂಪರ್ಕಿಸುವ ಮಕ್ರಾನ್‌ ಕರಾವಳಿ ಹೆದ್ದಾರಿ ಕೊಚ್ಚಿ ಹೋಗಿದೆ. ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು,ದುರಸ್ತಿ ಕಾರ್ಯ ನಡೆದಿದೆ ಎಂದೂ ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.