ADVERTISEMENT

ಜಪಾನ್‌ನಲ್ಲಿ ಭಾರಿ ಮಳೆ

ಏಜೆನ್ಸೀಸ್
Published 21 ಸೆಪ್ಟೆಂಬರ್ 2024, 12:34 IST
Last Updated 21 ಸೆಪ್ಟೆಂಬರ್ 2024, 12:34 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಟೋಕಿಯೊ: ಜಪಾನ್‌ನ ನೋಟೋ ಪ್ರದೇಶದಲ್ಲಿ ಶನಿವಾರ ಧಾರಾಕಾರ ಮಳೆಯಾಗಿದೆ. ಮಳೆಗೆ ಕೆಲವೆಡೆ ಭೂಕುಸಿತ ಸಂಭವಿಸಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಒಬ್ಬ ವ್ಯಕ್ತಿ ಕಾಣೆಯಾಗಿದ್ದಾನೆ ಎಂದು ಜಪಾನ್‌ನ ಹವಾಮಾನ ಸಂಸ್ಥೆ ತಿಳಿಸಿದೆ.

ಇಶಿಕಾವಾ ಪ್ರಾಂತ್ಯದ ಹಲವು ನಗರಗಳಲ್ಲಿ ಅಧಿಕ ಪ್ರಮಾಣದ ಮಳೆಯಾಗಿದ್ದು, ಭಾನುವಾರ ಕೂಡ 20 ಸೆ.ಮೀ.ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಸಂಸ್ಥೆಯು ತಿಳಿಸಿದೆ.

ADVERTISEMENT

ಇಶಿಕಾವಾದಲ್ಲಿ ಶನಿವಾರ ಕನಿಷ್ಠ 12 ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸ್ಥಳೀಯರು ಎಚ್ಚರ ವಹಿಸುವಂತೆ ಭೂ ಮತ್ತು ಮೂಲಸೌಕರ್ಯ ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.