ADVERTISEMENT

ಹಾಂಕಾಂಗ್‌ | ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ: 5 ಸಾವು, 19 ಮಂದಿಗೆ ಗಾಯ

ರಾಯಿಟರ್ಸ್
Published 10 ಏಪ್ರಿಲ್ 2024, 5:01 IST
Last Updated 10 ಏಪ್ರಿಲ್ 2024, 5:01 IST
<div class="paragraphs"><p>ಅಗ್ನಿ ಅವಘಡ</p></div>

ಅಗ್ನಿ ಅವಘಡ

   

(ಸಾಂದರ್ಭಿಕ ಚಿತ್ರ)

ಹಾಂಕಾಂಗ್‌: ಹಾಂಗ್ ಕಾಂಗ್‌ನ ಕೌಲೂನ್ ಜಿಲ್ಲೆಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ಘಟನೆಯಲ್ಲಿ ಐದು ಜನರು ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ADVERTISEMENT

ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಒಳಗೆ ಇದ್ದ ಜನರು, ರಕ್ಷಣೆಗಾಗಿ ಕೂಗಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಆದರೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಾಯಗೊಂಡವರ ಪೈಕಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

ಅಪಾರ್ಟ್‌ಮೆಂಟ್‌ನ ಸುತ್ತಮುತ್ತಲಿನ ರಸ್ತೆಯಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಸಂಚಾರ ದಟ್ಟಣೆ ಉಂಟಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.