ಹ್ಯೂಸ್ಟನ್:ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಭಾಗವಹಿಸಲಿರುವ ಬಹುನಿರೀಕ್ಷಿತ ‘ಹೌಡಿ ಮೋದಿ’ ಕಾರ್ಯಕ್ರಮ ಭಾರತೀಯ ಕಾಲಮಾನ ಪ್ರಕಾರ ಇಂದು ರಾತ್ರಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ‘ಹೌಡಿ ಮೋದಿ’ ಎಂಬ ಹೆಸರಿಟ್ಟಿರುವುದು ಯಾಕೆ? ‘ಹೌಡಿ’ ಎಂದರೇನು ಎಂಬ ಕುತೂಹಲ ಸಹಜವಾಗಿಯೇ ಜನರಲ್ಲಿ ಮೂಡಿದೆ.
‘ಹೌಡಿ’ ಎಂದರೆ ಅನೌಪಚಾರಿಕವಾಗಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಒಂದು ಪದ. ‘ಹೌ ಡು ಯು ಡು ಅಥವಾ ಹೇಗಿದ್ದೀರಿ’ ಎಂಬ ಪದದ ಸಂಕ್ಷಿಪ್ತ ರೂಪವಾಗಿ ಬಳಕೆಯಲ್ಲಿದೆ. ಅಮೆರಿಕದ ಮಕ್ಸಿಕೊ, ನೆವಾಡ, ಒರೆಗಾನ್ ಮತ್ತು ಟೆಕ್ಸಾಸ್‌ನಲ್ಲಿ ಈ ಪದ ಆಡುಭಾಷೆಯಾಗಿ ಬಳಕೆಯಲ್ಲಿದೆ. ಇದೇ ಪದವನ್ನು ಮೋದಿ ಅವರ ಕಾರ್ಯಕ್ರಮಕ್ಕೂ ಇಡಲಾಗಿದೆ.
ಹ್ಯೂಸ್ಟನ್‌ನ ಎನ್‌ಆರ್‌ಜಿ ಫುಟ್‌ಬಾಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 50 ಸಾವಿರ ಭಾರತೀಯ ಅಮೆರಿಕನ್ನರು ಭಾಗವಹಿಸುವ ನಿರೀಕ್ಷೆಯಿದೆ.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.