ಕೊಲಂಬೊ: ನೆರೆಯ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿರುವ ಭಾರತೀಯ ವಾಯುಪಡೆ ಮುಖ್ಯಸ್ಥ ಏರ್‌ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಅವರು, ಬುಧವಾರ ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಮತ್ತು ಪ್ರಧಾನಿ ದಿನೇಶ್ ಗುಣವರ್ಧನೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಶ್ರೀಲಂಕಾದ ಏರ್ ಮಾರ್ಷಲ್ ಎಸ್.ಕೆ. ಪತಿರಾಣ ಅವರ ಆಹ್ವಾನದ ಮೇರೆಗೆ ಚೌಧರಿ ಈ ಪ್ರವಾಸ ಕೈಗೊಂಡಿದ್ದಾರೆ. ರಕ್ಷಣೆಗೆ ಸಂಬಂಧಿಸಿದ ದ್ವಿಪಕ್ಷೀಯ ಸಹಕಾರದ ಬಗ್ಗೆ ಅವರು ಚರ್ಚಿಸಿದರು.
ಎರಡು ದೇಶಗಳ ನಡುವಣ ರಕ್ಷಣೆ ವಿಷಯಕ್ಕೆ ಸಂಬಂಧಿಸಿದಂತೆ ಪರಸ್ಪರ ಬದ್ಧತೆ ಕಾಯ್ದುಕೊಳ್ಳುವ ಬಗ್ಗೆ ಮಾತುಕತೆ ವೇಳೆ ಚರ್ಚಿಸಲಾಯಿತು. ಅಲ್ಲಿನ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಣಾ ಕಾಲೇಜಿನಲ್ಲಿ ಚೌಧರಿ ಭಾಷಣ ಕೂಡ ಮಾಡಿದ್ದಾರೆ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.
ರಕ್ಷಣಾ ಖಾತೆ ರಾಜ್ಯ ಸಚಿವ ಪ್ರೇಮಿತ ಭಂಡಾರ ತೆನ್ನಿಕೋನ್ ಹಾಗೂ ರಕ್ಷಣಾ ಸಲಹೆಗಾರ ಸಂಘಲ ರತ್ನಾಯಕ ಅವರನ್ನೂ ಚೌಧರಿ ಭೇಟಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.