ವಿಶ್ವಸಂಸ್ಥೆ: ಲೆಬನಾನ್‌ನಲ್ಲಿ ರಾಜತಾಂತ್ರಿಕ ಪರಿಹಾರಕ್ಕೆ ಆದ್ಯತೆ ನೀಡುತ್ತೇವೆ. ಆದರೆ, ಅದು ವಿಫಲವಾದರೆ, ಸಾಧ್ಯವಿರುವ ಎಲ್ಲ ಮಾರ್ಗಗಳನ್ನೂ ಅನುಸರಿಸುತ್ತೇವೆ ಎಂದು ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ರಾಯಭಾರಿಯಾಗಿರುವ ಡ್ಯಾನಿ ಡೆನಾನ್ ಹೇಳಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಮಾತನಾಡಿರುವ ಡ್ಯಾನಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗುರುವಾರ ನ್ಯೂಯಾರ್ಕ್‌ಗೆ ಬರಲಿದ್ದು, ಯುಎನ್ ಮಹಾ ಅಧಿವೇಶನವನ್ನುದ್ದೇಶಿಸಿ ಶುಕ್ರವಾರ ಮಾತನಾಡಲಿದ್ದಾರೆ ಎಂದಿದ್ದಾರೆ.
ಕಳೆದ ವರ್ಷ ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ಆರಂಭವಾದಾಗಿಂದ ಲೆಬನಾನಿನ ಹಿಜ್ಬುಲ್ಲಾ ಸಂಘಟನೆ ಮತ್ತು ಇಸ್ರೇಲ್ ಪಡೆ ನಡುವೆ ನಿರಂತರವಾಗಿ ಗುಂಡಿನ ಚಕಮಕಿ ನಡೆಯುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಗಡಿಯಾಚೆಗಿನ ಸಂಘರ್ಷ ತೀವ್ರಗೊಂಡಿದೆ.
ಹಿಜ್ಬುಲ್ಲಾ ಬಂಡುಕೋರರ ತಾಣವನ್ನು ಗುರಿಯಾಗಿಸಿಕೊಂಡು ಲೆಬನಾನ್ ರಾಜಧಾನಿ ಬೈರೂತ್‌ನ ದಕ್ಷಿಣ ಭಾಗದ ಮೇಲೆ ಇಸ್ರೇಲ್ ಸೇನೆ ಮಂಗಳವಾರ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 50 ಮಕ್ಕಳು, 94 ಮಹಿಳೆಯರು ಸೇರಿದಂತೆ 560ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. 1,800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಇದಕ್ಕೆ ಪ್ರತಿಯಾಗಿ, ಇಸ್ರೇಲ್‌ನ ಪ್ರಮುಖ ನಗರ ಟೆಲ್ ಅವಿವ್ ಮೇಲೆ ಲೆಬನಾನ್ ಬುಧವಾರ ಕ್ಷಿಪಣಿ ದಾಳಿ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.