ಲಂಡನ್: ಲಂಡನ್‌ನ ಇಂಪೀರಿಯಲ್ ಕಾಲೇಜಿನ ಕೃತಕ ಬುದ್ಧಿಮತ್ತೆ (ಎಐ) ಮತ್ತು ಜಾಗತಿಕ ವಿಜ್ಞಾನ ಫೆಲೋಶಿಪ್ ಕಾರ್ಯಕ್ರಮಕ್ಕೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಮತ್ತು ಹೈದರಾಬಾದ್‌ನ ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರ (ಎನ್‌ಸಿಬಿಎಸ್) ಆಯ್ಕೆಯಾಗಿವೆ.
ಎರಡು ವರ್ಷಗಳ ಫೆಲೋಶಿಪ್ ಕಾರ್ಯಕ್ರಮದಲ್ಲಿ ಸಂಶೋಧಕರು ಒಂದು ವರ್ಷ ಇಂಪೀರಿಯಲ್ ಕಾಲೇಜಿನಲ್ಲಿ ಹಾಗೂ ನಂತರದ ವರ್ಷದಲ್ಲಿ ತಮ್ಮ ಮೂಲ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಎಐ ಕುರಿತ ಜ್ಞಾನ ಹೆಚ್ಚಿಸುವುದು ಈ ಕಾರ್ಯಕ್ರಮದ ಉದ್ದೇಶ.
ಸ್ಮಿಟ್ ಸೈನ್ಸಸ್ ಸಂಸ್ಥೆಯು ಇದಕ್ಕೆ ಹಣಕಾಸು ನೆರವು ನೀಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.