ADVERTISEMENT

ಜೈಲು ಸೂಪರಿಂಟೆಂಡೆಂಟ್‌ ವಿರುದ್ದ ನಿಂದನೆ ಪ್ರಕರಣ ದಾಖಲಿಸಿದ ಇಮ್ರಾನ್

ಪಿಟಿಐ
Published 11 ಸೆಪ್ಟೆಂಬರ್ 2023, 13:57 IST
Last Updated 11 ಸೆಪ್ಟೆಂಬರ್ 2023, 13:57 IST
ಇಮ್ರಾನ್‌ ಖಾನ್‌
ಇಮ್ರಾನ್‌ ಖಾನ್‌   

ಇಸ್ಲಾಮಾಬಾದ್ : ಮಕ್ಕಳ ಜೊತೆಗೆ ಫೋನ್‌ನಲ್ಲಿ ಮಾತನಾಡಲು ಅವಕಾಶ ನಿರಾಕರಿಸಿದ ಅಟೊಕ್ ಜೈಲಿನ ಸೂಪರಿಂಟೆಂಡೆಂಟ್‌ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುವಂತೆ ಕೋರಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿಶೇಷ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸರ್ಕಾರದ ರಹಸ್ಯ ಬಹಿರಂಗಪಡಿಸಿದ ಪ್ರಕರಣದಲ್ಲಿ ಇಮ್ರಾನ್‌ ಖಾನ್ ಬಂಧಿತರಾಗಿದ್ದು, ಸೆ.13ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ವಿಚಾರಣಾ ನ್ಯಾಯಾಲಯ ಶಿಕ್ಷೆ ವಿಧಿಸಿದ ಬಳಿಕ ತೋಷಖಾನಾ ಭ್ರಷ್ಟಾಚಾರ ಪ್ರಕರಣ ಕುರಿತು ಆ. 5ರಂದು ಬಂಧಿಸಲಾಗಿತ್ತು.

ರಹಸ್ಯ ಕಾಯ್ದೆಯಡಿ ಬಂಧಿಸಲಾಗಿದೆ ಎಂಬ ನೆಪವೊಡ್ಡಿ ಮಕ್ಕಳಾದ ಖಾಸಿಂ ಮತ್ತು ಸುಲೇಮನ್ ಜೊತೆಗೆ ಫೋನ್‌ನಲ್ಲಿ ಮಾತನಾಡಲು ಜೈಲಿನ ಸೂಪರಿಂಟೆಂಡೆಂಟ್ ಅವಕಾಶ ನಿರಾಕರಿಸಿದ್ದಾರೆ ಎಂದು ಇಮ್ರಾನ್‌ ಖಾನ್‌ ಅರ್ಜಿಯಲ್ಲಿ ದೂರಿದ್ದಾರೆ ಎಂದು ಜಿಯೊ ನ್ಯೂಸ್ ವರದಿ ಮಾಡಿದೆ.

ADVERTISEMENT

ನ್ಯಾಯಮೂರ್ತಿ ಅಬ್ದುಲ್‌ ಹಸ್‌ನತ್ ಜುಲ್ಗಾರ್‌ನೈನ್‌ ಅವರು ಜೈಲು ಸೂಪರಿಂಟೆಂಡೆಂಟ್‌ ಆರಿಫ್ ಶೆಹಜಾದ್‌ ಅವರಿಗೆ ನೋಟಿಸ್‌ ಜಾರಿ ಮಾಡಿದ್ದು, ಸೆ. 15ರ ಒಳಗೆ ಪ್ರತಿಕ್ರಿಯೆ ದಾಖಲಿಸುವಂತೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.