ಕೊಲಂಬೊ (ಪಿಟಿಐ): ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇಂಧನ ಖರೀದಿಸಲು ಸರದಿ ಸಾಲಿನಲ್ಲಿ ನಿಂತಿದ್ದ ವೇಳೆ ಇಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ.
ಶ್ರೀಲಂಕಾದ ಪೂರ್ವ ಪ್ರಾಂತ್ಯದಲ್ಲಿರುವ ಕಿನ್ನಿಯಾ ಪಟ್ಟಣದ ಬಂಕ್ ಬಳಿಎರಡು ರಾತ್ರಿಗಳಿಂದ ಮೋಟರ್ ಸೈಕಲ್‌ನೊಂದಿಗೆ ಕಾಯುತ್ತಿದ್ದ 59 ವರ್ಷದ ವ್ಯಕ್ತಿ ಕುಸಿದು ಬಿದ್ದು, ಮೃತಪಟ್ಟಿದ್ದಾರೆ ಎಂದು ನ್ಯೂಸ್ ಪೋರ್ಟಲ್ ಲಂಕಾ ಫಸ್ಟ್ ತಿಳಿಸಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ದೇಶದ ಪಶ್ಚಿಮ ಪ್ರಾಂತ್ಯದ ಮಥುಗಮದಲ್ಲಿ ಇಂಧನ ತುಂಬುವ ಕೇಂದ್ರದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ 70 ವರ್ಷದ ವ್ಯಕ್ತಿ ಸಹ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
10 ದಿನಗಳ ನಂತರ ಬಂಕ್‌ಗಳಿಗೆ ಇಂಧನ ತಲುಪಿಸಲಾಗಿದ್ದು, ಸರಿಯಾದ ವಿತರಣಾ ವ್ಯವಸ್ಥೆ ಇಲ್ಲದ ಕಾರಣ ಇಂಧನ ಪಡೆಯಲು ನೂಕುನುಗ್ಗಲು ಉಂಟಾಗಿದೆ ಎಂದು ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.