ವಿಶ್ವಸಂಸ್ಥೆ: ಗಾಜಾದಲ್ಲಿ ಐದು ತಿಂಗಳಿಂದ ನಡೆಯುತ್ತಿರುವ ಸಂಘರ್ಷದಿಂದ ಭಾರತವು ತೀವ್ರ ತೊಂದರೆಗೀಡಾಗಿದೆ ಎಂದು ವಿಶ್ವಸಂಸ್ಥೆಯಲ್ಲಿರುವ ಭಾರತದ ಕಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಕಳವಳ ವ್ಯಕ್ತಪಡಿಸಿದರು.
‘ಈ ಸಂಘರ್ಷದಿಂದ ಅಲ್ಲಿ ನಾಗರಿಕರ ಸಾವು–ನೋವುಗಳು ಸಂಭವಿಸುತ್ತಿದ್ದು, ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದು ಸ್ವೀಕಾರಾರ್ಹವಲ್ಲ’ ಎಂದು ಅವರು ಪ್ರತಿಪಾದಿಸಿದರು.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ವೀಟೊ ಬಳಕೆ ಕುರಿತು ಸೋಮವಾರ ಮಾತನಾಡಿದ ಅವರು, ‘ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷವು ವಿಶೇಷವಾಗಿ ಮಕ್ಕಳು, ಮಹಿಳೆಯರು ಸೇರಿದಂತೆ ನಾಗರಿಕರ ಸಾವುಗಳಿಗೆ ಕಾರಣವಾಗಿದೆ. ಈ ಮಾನವೀಯ ಬಿಕ್ಕಟ್ಟು ಆತಂಕ ಮೂಡಿಸಿದೆ’ ಎಂದು ಅವರು ಹೇಳಿದರು.
ಗಾಜಾದಲ್ಲಿ ಮಾನವೀಯ ದೃಷ್ಟಿಯಿಂದ ಕದನ ವಿರಾಮಕ್ಕೆ ಕರೆ ನೀಡುವ ನಿರ್ಣಯ ಅಂಗೀಕಾರಕ್ಕೆ ಭದ್ರತಾ ಮಂಡಳಿಯಲ್ಲಿ ಕಳೆದ ತಿಂಗಳು ಅಮೆರಿಕ ವೀಟೊ ಅಧಿಕಾರ ಚಲಾಯಿಸಿ ತಡೆ ನೀಡಿತ್ತು.
ಈ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ನಿಲುವನ್ನು ಸ್ಪಷ್ಟಪಡಿಸಿದ ಕಾಂಬೋಜ್ ಅವರು, ಸಂಘರ್ಷದಲ್ಲಿ ನಾಗರಿಕರ ಸಾವನ್ನು ನವದೆಹಲಿ ಬಲವಾಗಿ ಖಂಡಿಸುತ್ತದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.