ಮಾಸ್ಕೋ: ಜಾಗತಿಕ ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಭಾರತ ಅರ್ಹವಾಗಿದೆ. ಏಕೆಂದರೆ ಪ್ರಸ್ತುತ ಅದರ (ಭಾರತ) ಆರ್ಥಿಕತೆ ಇತರ ದೇಶಗಳಿಗಿಂತ ವೇಗವಾಗಿ ಬೆಳೆಯುತ್ತಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಗುರುವಾರ ಸೋಚಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ರಷ್ಯಾ ಭಾರತದೊಂದಿಗೆ ಎಲ್ಲಾ ದಿಕ್ಕುಗಳಲ್ಲಿ ಸಂಬಂಧವನ್ನು ಅಭಿವೃದ್ಧಿಪಡಿಸುತ್ತಿದೆ. ದ್ವಿಪಕ್ಷೀಯ ಬಾಂಧವ್ಯಗಳಲ್ಲಿ ಗಾಢವಾದ ನಂಬಿಕೆಯಿದೆ ಎಂದು ಹೇಳಿದ್ದಾರೆ.
ಭಾರತ ಶ್ರೇಷ್ಠ ದೇಶ. ನಿಸ್ಸಂದೇಹವಾಗಿ ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸೇರಿಸಬೇಕು. ಆರ್ಥಿಕ ಬೆಳವಣಿಗೆಯಲ್ಲಿಯೂ ವಿಶ್ವದಲ್ಲಿ ಮುಂಚೂಣಿಯಲ್ಲಿದೆ. ಈಗ ಜನಸಂಖ್ಯೆಯ ದೃಷ್ಟಿಯಿಂದಲೂ ಬೃಹತ್ ರಾಷ್ಟ್ರ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.