ಬೀಜಿಂಗ್: ಕಾಶ್ಮೀರ ಸಮಸ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಪಾಕಿಸ್ತಾನ ತಮ್ಮ ಭಿನ್ನಾಭಿಪ್ರಾಯಗಳನ್ನು ಮಾತುಕತೆ ಮತ್ತು ಸಮಾಲೋಚನೆಯ ಮೂಲಕ ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು ಎಂದು ಚೀನಾ ಶುಕ್ರವಾರ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಮೂರನೇ ವಾರ್ಷಿಕೋತ್ಸವದಂದು ಈ ಕುರಿತು ಪ್ರತಿಕ್ರಿಯಿಸಿರುವಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಹುವಾ ಚುನ್ಯಿಂಗ್, ‘ಕಾಶ್ಮೀರದ ವಿಷಯದಲ್ಲಿ ಚೀನಾದ ನಿಲುವು ಸ್ಪಷ್ಟ ಮತ್ತು ಸ್ಥಿರವಾಗಿದೆ.ಇದು ಭಾರತ ಮತ್ತು ಪಾಕಿಸ್ತಾನದ ಸಮಸ್ಯೆಯಾಗಿದೆ ಎಂಬುದು ಅಂತರರಾಷ್ಟ್ರೀಯ ಸಮುದಾಯದ ದೃಷ್ಟಿಕೋನವೂ ಆಗಿದೆ’ ಎಂದು ಹೇಳಿದರು.
‘ಈ ಬಗ್ಗೆ, ಎರಡೂ ದೇಶಗಳು ಸಂಯಮ ಮತ್ತು ವಿವೇಕದಿಂದ ಇರಬೇಕು.ವಿಶೇಷವಾಗಿ ಪರಿಸ್ಥಿತಿಯನ್ನು ಬದಲಾಯಿಸಲು ಅಥವಾ ಉದ್ವಿಗ್ನತೆಯನ್ನು ಹೆಚ್ಚಿಸಲು ಏಕಪಕ್ಷೀಯ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಉಭಯದೇಶಗಳು ನಿಲ್ಲಿಸಬೇಕೆಂದು ನಾವುಮೂರು ವರ್ಷಗಳ ಹಿಂದೆಯೇ ಹೇಳಿದ್ದೇವೆ’ ಎಂದು ಹುವಾ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.