ದುಬೈ: ಪ್ರಸಕ್ತ ಸಾಲಿನ ಹವಾಮಾನ ಬದಲಾವಣೆ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ (ಸಿಸಿಪಿಐ) ಭಾರತ ಏಳನೇ ಸ್ಥಾನಕ್ಕೇರಿದೆ.
ವಿಶ್ವಸಂಸ್ಥೆಯ 'ಸಿಒಪಿ28' ಹವಾಮಾನ ಶೃಂಗಸಭೆಯಲ್ಲಿ ಈ ವರದಿ ಪ್ರಕಟಿಸಲಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಭಾರತ ಒಂದು ಸ್ಥಾನ ಉತ್ತಮಪಡಿಸಿಕೊಂಡಿದೆ ಎಂದು ವರದಿ ಹೇಳಿದೆ.
ಜಾಗತಿಕ ಹಸಿರುಮನೆ ಅನಿಲದ ಹೊರಸೂಸುವಿಕೆಯ ತಗ್ಗಿಸುವಿಕೆ ದಿಸೆಯಲ್ಲಿ ಭಾರತವು ಅತ್ಯುತ್ತಮ ನಿರ್ವಹಣೆ ಕಾಪಾಡಿಕೊಂಡಿದೆ ಎಂದು ಹೇಳಿದೆ.
ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದ್ದರೂ ತುಲನಾತ್ಮಕವಾಗಿ ಭಾರತವು ಕಡಿಮೆ ಹೊರಸೂಸುವಿಕೆಯನ್ನು ಹೊಂದಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.