ADVERTISEMENT

ಭದ್ರತೆ ಭೀತಿ: ಟೊರೊಂಟೊದಲ್ಲಿರುವ ರಾಯಭಾರ ಕಚೇರಿಯ ನಿಗದಿತ ಕಾರ್ಯಕ್ರಮಗಳು ರದ್ದು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ನವೆಂಬರ್ 2024, 4:51 IST
Last Updated 7 ನವೆಂಬರ್ 2024, 4:51 IST
<div class="paragraphs"><p>ಖಾಲಿಸ್ತಾನ ಧ್ವಜಗಳನ್ನು ಹಿಡಿದಿದ್ದ ಪ್ರತಿಭಟನಾಕಾರರು ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ದೇವಾಲಯದ ಆವರಣದಲ್ಲಿ&nbsp;ಘರ್ಷಣೆ ನಡೆಸಿದ್ದ ಚಿತ್ರ</p></div>

ಖಾಲಿಸ್ತಾನ ಧ್ವಜಗಳನ್ನು ಹಿಡಿದಿದ್ದ ಪ್ರತಿಭಟನಾಕಾರರು ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ದೇವಾಲಯದ ಆವರಣದಲ್ಲಿ ಘರ್ಷಣೆ ನಡೆಸಿದ್ದ ಚಿತ್ರ

   

ಟೊರೊಂಟೊ (ಕೆನಡಾ): ಟೊರೊಂಟೊದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭದ್ರತೆಯ ಆತಂಕದಿಂದಾಗಿ ನಿಗದಿತ ಕಾರ್ಯಕ್ರಮಗಳನ್ನು ರದ್ದುಮಾಡಲು ನಿರ್ಧರಿಸಿದೆ.

'ಸಮುದಾಯ ಕಾರ್ಯಕ್ರಮಗಳ ಆಯೋಜಕರಿಗೆ ಕನಿಷ್ಠ ರಕ್ಷಣೆ ಒದಗಿಸುವ ವಿಚಾರದಲ್ಲಿ ಭದ್ರತಾ ಏಜೆನ್ಸಿಗಳು ತಮ್ಮ ಅಸಮರ್ಥತೆಯನ್ನು ತೋರಿವೆ. ಹೀಗಾಗಿ, ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮಗಳನ್ನು ರದ್ದು ಮಾಡಲು ರಾಯಭಾರ ಕಚೇರಿಯು ತೀರ್ಮಾನಿಸಿದೆ' ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ತಿಳಿಸಿದೆ.

ADVERTISEMENT

ಖಾಲಿಸ್ತಾನ ಧ್ವಜಗಳನ್ನು ಹಿಡಿದಿದ್ದ ಪ್ರತಿಭಟನಾಕಾರರು ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ದೇವಾಲಯದ ಆವರಣದೊಳಗೆ ನುಗ್ಗಿ, ಅಲ್ಲಿನ ಜನರೊಂದಿಗೆ ಭಾನುವಾರ ಘರ್ಷಣೆ ನಡೆಸಿದ್ದರು. ದೂತವಾಸ ಕಚೇರಿಯು ದೇವಾಲಯದ ಆಡಳಿತದ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೂ ಕಳೆದವಾರ ಅಡ್ಡಿಪಡಿಸಿದ್ದರು. ಇದರ ಬೆನ್ನಲ್ಲೇ, ಈ ನಿರ್ಧಾರ ಮಾಡಲಾಗಿದೆ.

ಕೆನಡಾದಲ್ಲಿ ಹಿಂದೂಗಳ ಮೇಲೆ ನಡೆದ 'ಉದ್ದೇಶಪೂರ್ವಕ ದಾಳಿ'ಯನ್ನು ಭಾರತ ಖಂಡಿಸಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ನ್ಯಾಯವನ್ನು ಖಾತ್ರಿಪಡಿಸುವಂತೆ ಹಾಗೂ ಕಾನೂನು–ಸುವ್ಯವಸ್ಥೆಯನ್ನು ಎತ್ತಿಹಿಡಿಯುವಂತೆ ಕೆನಡಾ ಸರ್ಕಾರವನ್ನು ಒತ್ತಾಯಿಸಿದ್ದರು.

ಇಂತಹ ಘಟನೆಗಳು ಮರುಕಳಿಸದಂತೆ ಕೆನಡಾ ಸರ್ಕಾರ ಎಚ್ಚರ ವಹಿಸಬೇಕು ಎಂದು ಭಾರತದಲ್ಲಿನ ರಾಜಕೀಯ ಪಕ್ಷಗಳು ಮತ್ತು ಧಾರ್ಮಿಕ ಸಂಘಟನೆಗಳು ಆಗ್ರಹಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.