ADVERTISEMENT

ಪ್ರತಿಷ್ಠಿತ ‘ಮಾರ್ಕೋನಿ’ ಪುರಸ್ಕಾರಕ್ಕೆ ಭಾರತ ಮೂಲದ ಹರಿಬಾಲಕೃಷ್ಣನ್‌ ಆಯ್ಕೆ

ಪಿಟಿಐ
Published 1 ಮಾರ್ಚ್ 2023, 13:49 IST
Last Updated 1 ಮಾರ್ಚ್ 2023, 13:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನ್ಯೂಯಾರ್ಕ್: ಮೆಸಾಚುಸೆಟ್ಸ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯಲ್ಲಿ ಪ್ರಾಧ್ಯಾಪಕರಾಗಿರುವ, ಭಾರತ ಮೂಲದ ಹರಿ ಬಾಲಕೃಷ್ಣನ್‌ ಅವರು ಪ್ರತಿಷ್ಠಿತ ‘ಮಾರ್ಕೋನಿ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

‘ವೈರ್‌ ಮತ್ತು ವೈರ್‌ಲೆಸ್‌ ನೆಟ್‌ವರ್ಕಿಂಗ್‌, ಮೊಬೈಲ್‌ ಸೆನ್ಸಿಂಗ್ ಹಾಗೂ ಸಂಬಂಧಿಸಿದ ಕ್ಷೇತ್ರಗಳಲ್ಲಿ ನಡೆಸಿರುವ ಸಂಶೋಧನೆಗಳಿಗಾಗಿ ಹರಿ ಬಾಲಕೃಷ್ಣನ್‌ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದು ಮಾರ್ಕೋನಿ ಸೊಸೈಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ಟೋಬರ್‌ 27ರಂದು ವಾಷಿಂಗ್ಟನ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ADVERTISEMENT

ಹರಿ ಬಾಲಕೃಷ್ಣನ್‌ ಅವರು ಎಂಐಟಿಯ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಹಾಗೂ ಕಂಪ್ಯೂಟರ್‌ ಸೈನ್ಸ್ ವಿಭಾಗದಲ್ಲಿ ಕಂಪ್ಯೂಟರ್‌ ವಿಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಕ್ಷೇತ್ರದಲ್ಲಿ ಕೈಗೊಳ್ಳುವ ಸಂಶೋಧನೆಗಳ ಮೂಲಕ ಡಿಜಿಟಲ್ ಒಳಗೊಳ್ಳುವಿಕೆಗೆ ಮಹತ್ವದ ಕೊಡುಗೆ ನೀಡುವ ಸಂಶೋಧಕರನ್ನು ಸಂಸ್ಥೆಯು ಈ ಪ್ರಶಸ್ತಿಗೆ ಆಯ್ಕೆ ಮಾಡುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.