ನ್ಯೂಯಾರ್ಕ್: ಅಮೆರಿಕದ ಪ್ರತಿಷ್ಠಿತ ‘ಪ್ರಿನ್ಸ್‌ಟನ್ ವಿಶ್ವವಿದ್ಯಾಲಯ’ದ ಆವರಣದಲ್ಲಿ ಪ್ಯಾಲೆಸ್ಟೀನ್ ಪರ ಪ್ರತಿಭಟನೆಯಲ್ಲಿ ಭಾಗಿಯಾದ ಕಾರಣಕ್ಕೆ ಭಾರತ ಮೂಲದ ವಿದ್ಯಾರ್ಥಿನಿ ಸೇರಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಇಬ್ಬರು ವಿದ್ಯಾರ್ಥಿಗಳು ಕಾಲೇಜಿನ ಆವರಣ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ ಎಂದು ತಿಳಿದುಬಂದಿದೆ.
ಗಾಜಾದಲ್ಲಿ ಯುದ್ಧದಲ್ಲಿ ತೊಡಗಿರುವ ಇಸ್ರೇಲ್ ಮತ್ತು ಆ ದೇಶದ ಕಂಪನಿಗಳ ಜೊತೆಗಿನ ಹಣಕಾಸು ಒಪ್ಪಂದಗಳನ್ನು ಕಾಲೇಜುಗಳು ಮಾಡಿಕೊಳ್ಳಬಾರದು ಎಂದು ಒತ್ತಾಯಿಸಿ ಗುರುವಾರ ಬೆಳಿಗ್ಗೆ ಸುಮಾರು 100 ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿದ್ದರು. ಈ ಪ್ರತಿಭಟನೆಗಳು ಯಹೂದಿ ವಿರೋಧಿಯಾಗಿದ್ದು, ವಿವಿ ಕ್ಯಾಂಪಸ್ ಪ್ರವೇಶಿಸಲು ಭಯಪಡುವಂತಾಗಿದೆ ಎಂದು ಕೆಲವು ಯಹೂದಿ ವಿದ್ಯಾರ್ಥಿಗಳು ಆರೋಪಿಸಿದ್ದರು. ಹೀಗಾಗಿ, ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿವಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.