ADVERTISEMENT

ವಿಶ್ವಸಂಸ್ಥೆ: ಹುತಾತ್ಮ ಭಾರತೀಯ ಶಾಂತಿಪಾಲಕನಿಗೆ ಪ್ರತಿಷ್ಠಿತ ಪದಕ

ಪಿಟಿಐ
Published 29 ಮೇ 2024, 0:27 IST
Last Updated 29 ಮೇ 2024, 0:27 IST
<div class="paragraphs"><p>ವಿಶ್ವಸಂಸ್ಥೆ</p></div>

ವಿಶ್ವಸಂಸ್ಥೆ

   

ವಿಶ್ವಸಂಸ್ಥೆ: ವಿಶ್ವಸಂಸ್ಥೆಯಡಿ ಶಾಂತಿಪಾಲಕನಾಗಿ ಕರ್ತವ್ಯ ನಿರ್ವಹಿಸುವಾಗ ಹುತಾತ್ಮನಾದ ಭಾರತೀಯ ಸೇರಿದಂತೆ 60ಕ್ಕೂ ಹೆಚ್ಚು ಮಿಲಿಟರಿ, ಪೊಲೀಸ್ ಮತ್ತು ನಾಗರಿಕ ಶಾಂತಿಪಾಲಕರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಪದಕ ಘೋಷಿಸಲಾಗಿದೆ.

ವಿಶ್ವಸಂಸ್ಥೆಯ ಶಾಂತಿಪಾಲಕರ ಅಂತರರಾಷ್ಟ್ರೀಯ ದಿನಾಚರಣೆ ಸಂದರ್ಭ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್‌ ಕಾಂಗೋದಲ್ಲಿ ಸೇವೆ ಸಲ್ಲಿಸುವಾಗ ಹುತಾತ್ಮರಾದ ನಾಯಕ್ ಧನಂಜಯ್ ಕುಮಾರ್ ಸಿಂಗ್ ಅವರಿಗೆ ಮರಣೋತ್ತರವಾಗಿ ಡಾಗ್ ಹಮ್ಮರ್ಕ್‌ಜೋಲ್ಡ್‌ ಪದಕ ನೀಡಿ ಗೌರವಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ADVERTISEMENT

ಮೇ 30ರಂದು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಪದಕ ವಿತರಣೆ ಸಮಾರಂಭ ನಡೆಯಲಿದೆ. ಇದುವರೆಗೂ ಸುಮಾರು 180 ಭಾರತೀಯರು ವಿಶ್ವಸಂಸ್ಥೆಯ ಶಾಂತಿಪಾಲಕರಾಗಿ ಕರ್ತವ್ಯ ನಿರ್ವಹಿಸುವಾಗ ಹುತಾತ್ಮರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.