ಡೆನ್‌ಪಸಾರ್(ಇಂಡೋನೇಷ್ಯಾ): ಇಂಡೋನೇಷ್ಯಾದ ಬಾಲಿ ದ್ವೀಪದ ಸಮೀಪ ಬುಧವಾರ ಹಡಗಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ಹಡಗಿನಲ್ಲಿದ್ದ ಐವರು ಸಿಬ್ಬಂದಿ ಸಾವಿಗೀಡಾಗಿದ್ದು, 15 ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ನೂಸ ಟೆಂಗರ ಪ್ರದೇಶದತ್ತ ತೆರಳುತ್ತಿದ್ದ ‘ಎಲಿಜಬೆತ್’ ಹೆಸರಿನ ಈ ಹಡಗಿನಲ್ಲಿ 21 ಸಿಬ್ಬಂದಿಗಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.