ADVERTISEMENT

ಇಂಡೋನೇಷ್ಯಾ: ಕಾಣೆಯಾಗಿದ್ದ ಮಹಿಳೆ ಹೆಬ್ಬಾವಿನ ಹೊಟ್ಟೆಯಲ್ಲಿ ಹೆಣವಾಗಿ ಪತ್ತೆ!

ಇಂಡೋನೇಷ್ಯಾದಲ್ಲಿ ಘಟನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಜೂನ್ 2024, 3:47 IST
Last Updated 9 ಜೂನ್ 2024, 3:47 IST
<div class="paragraphs"><p>ಹೆಬ್ಬಾವು, ಸಾಂದರ್ಭಿಕ ಚಿತ್ರ</p></div>

ಹೆಬ್ಬಾವು, ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕಾಣೆಯಾಗಿದ್ದ ಮಹಿಳೆಯೊಬ್ಬರು ಹೆಬ್ಬಾವಿನ ಹೊಟ್ಟೆಯಲ್ಲಿ ಹೆಣವಾಗಿ ಪತ್ತೆಯಾಗಿರುವ ಘಟನೆ ಇಂಡೋನೇಷ್ಯಾದಲ್ಲಿ‌ ನಡೆದಿದೆ.

ದೈತ್ಯ ಹೆಬ್ಬಾವೊಂದು ಫರಿದಾ ಎನ್ನುವ 49 ವರ್ಷದ ಮಹಿಳೆಯನ್ನು ಜೀವಂತವಾಗಿ ನುಂಗಿ ಹಾಕಿದೆ. ಈ ಕುರಿತು ಎನ್.ಡಿ.ಟಿ.ವಿ ವೆಬ್ಸೈಟ್ ವರದಿ ಮಾಡಿದೆ.

ADVERTISEMENT

ಈ ಘಟನೆ ಇಂಡೋನೇಷ್ಯಾದ ದಕ್ಷಿಣದ ಪ್ರಾಂತ್ಯವಾದ ಸುಲಾವೇಸಿ ಬಳಿಯ ಕಾಲಾಪಾಂಗ್ ಎಂಬಲ್ಲಿ ನಡೆದಿದೆ.

ಮಹಿಳೆ ಕಾಣೆಯಾಗಿರುವ ಬಗ್ಗೆ ಆಕೆಯ ಪತಿ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಜಂಟಿ ಕಾರ್ಯಾಚರಣೆ ನಡೆಸಿದಾಗ ಗ್ರಾಮದ ಅರಣ್ಯದಲ್ಲಿ 16 ಅಡಿ ಉದ್ದದ ಹೆಬ್ಬಾವು ಪತ್ತೆಯಾಗಿತ್ತು. ಹೆಬ್ಬಾವು ಮುಂದೆ ಹೋಗದೇ ತೆವಳುವುದನ್ನು ಕಂಡು ಅರಣ್ಯ ಇಲಾಖೆಯವರು ಹೆಬ್ಬಾವಿನ ಹೊಟ್ಟೆ ಸೀಳಿದಾಗ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ.

ಹೆಬ್ಬಾವುಗಳು ಮನುಷ್ಯರನ್ನು ಜೀವಂತವಾಗಿ ನುಂಗುವ ಘಟನೆ ತೀರಾ ಅಪರೂಪವಾದರೂ ಇಂಡೋನೇಷ್ಯಾದಲ್ಲಿ ಇಂತಹ ಘಟನೆಗಳು ಆಗಾಗ ಕೇಳಿ ಬರುತ್ತವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.